ಮಡಿಕೇರಿ, ಆ. ೩೦: ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿರುವ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದು, ಇದನ್ನು ತಡೆಗಟ್ಟಲು ಪರಿಣಾಮಕಾರಿ ಕ್ರಮವನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿತ ಧರ್ಮಜ ಉತ್ತಪ್ಪ ಸೂಚನೆ ನೀಡಿದರು.

ನಗರದ ಜಿ.ಪಂ. ಕಚೇರಿಯಲ್ಲಿ ಜಿಲ್ಲಾಮಟ್ಟದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಹೆಚ್ಚಿನ ಶಕ್ತಿ ತುಂಬಿದೆ. ಸಮಾಜದ ಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ಸರ್ಕಾರದ ೫ ಗ್ಯಾರಂಟಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು. ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳೂ ಸಹ ಅಗತ್ಯ ಸಹಕಾರ ನೀಡಬೇಕು. ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಬಗ್ಗೆ ನಿರಂತರ ದೂರುಗಳು ದಾಖಲಾಗಿದ್ದು, ಈ ಸಂಬAಧ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಫಲಾನುಭವಿಯೇ ಅಕ್ಕಿಯನ್ನು ಮಾರಾಟ ಮಾಡುತ್ತಿರುವುದು ತಿಳಿದು ಬಂದಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಸಂಬAಧಪಟ್ಟ ಇಲಾಖೆಯ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ ಎಂದು ಧರ್ಮಜ ಉತ್ತಪ್ಪ ತಿಳಿಸಿದರು.

ಕುಶಾಲನಗರ ತಾಲೂಕು ಅಧ್ಯಕ್ಷ ವಿ.ಪಿ. ಶಶಿಧರ್ ಅವರು ಮಾತನಾಡಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಮಟ್ಟದ ಸಭೆಗಳಿಗೆ ಶಕ್ತಿ ಯೋಜನೆಯ ಕುರಿತು ಚರ್ಚಿಸಲು ಡಿಪೋ ಮ್ಯಾನೇಜರ್ ಅಥವಾ ಎಟಿಎಸ್ ಅವರನ್ನು ಕಳುಹಿಸಬೇಕು. ಅದನ್ನು ಹೊರತುಪಡಿಸಿ ಟಿ.ಸಿ ಗಳನ್ನು ಕಳುಹಿಸುತ್ತಾರೆ. ಅವರಿಗೆ ಶಕ್ತಿ ಯೋಜನೆಯ ಕುರಿತಾಗಿ ಮಾಹಿತಿ ಇರುವುದಿಲ್ಲ. ಮುಂದಿನ ಸಭೆಗಳಲ್ಲಿ ಇಂತಹ ಪರಿಸ್ಥಿತಿ ಉಂಟಾಗಬಾರದು ಎಂದರು.

ಬಳಿಕ ಮಾತನಾಡಿದ ಅಧ್ಯಕ್ಷರು ಜಿಲ್ಲಾಮಟ್ಟದ ಸಭೆಗೆ ೫ ಇಲಾಖೆಗಳ ಮುಖ್ಯಸ್ಥರು ಹಾಜರಾಗಬೇಕು. ಈ ಬಗ್ಗೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ಈಗಾಗಲೇ ೫ ಇಲಾಖೆಗಳ ಮುಖ್ಯಸ್ಥರಿಗೂ ಸಭೆಯ ಮಾಹಿತಿ ನೀಡಲಾಗಿದೆ. ಪೂರ್ವಾನುಮತಿ ಪಡೆಯದೆ ಸಭೆಗೆ ಗೈರು ಹಾಜರಾಗುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗುವುದು ಎಂದು ತಿಳಿಸಿದರು.

ಸದಸ್ಯ ಕಾಂತರಾಜು ಮಾತನಾಡಿ, ಅನ್ನಭಾಗ್ಯ ಯೋಜನೆ ಯಡಿಯಲ್ಲಿ ನೀಡುತ್ತಿರುವ ಅಕ್ಕಿಯನ್ನು ಫಲಾನುಭವಿಗಳೇ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಹೆಚ್ಚಾಗಿ ಕೇಳಿ ಬರುತ್ತಿದ್ದು, ಆಹಾರ ಸರಬರಾಜು ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ವಹಿಸುವಂತೆ ಗಮನ ಸೆಳೆದರು. ಧರ್ಮಜ ಉತ್ತಪ್ಪ ಪ್ರತಿಕ್ರಿಯಿಸಿ, ಪ್ರತಿ ತಾಲೂಕು ವ್ಯಾಪ್ತಿಯಲ್ಲಿನ ಆಹಾರ ನಿರೀಕ್ಷಕರು ಅಕ್ಕಿ ವಿತ ರಣೆಯ ಸಂದರ್ಭ ಕಾರ್ಯಾಚರಣೆ ಹಮ್ಮಿಕೊಂಡು ಅನ್ನಭಾಗ್ಯ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟವಾಗದಂತೆ ಕ್ರಮ ವಹಿಸಬೇಕು ೪ಏಳನೆ ಎಂದು ತಿಳಿಸಿದರು. ಸದಸ್ಯ ಜಾನ್ಸನ್ ಮಾತನಾಡಿ, ತಾಲೂಕು ಮಟ್ಟದ ಕಾರ್ಯಕ್ರಮಗಳಿಗೆ ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರನ್ನು ಸಂಬAಧಪಟ್ಟ ಇಲಾಖೆಯ ಮುಖ್ಯಸ್ಥರು ಆಹ್ವಾನಿಸಬೇಕು. ಆದರೆ ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಸೂಕ್ತ ರೀತಿಯಲ್ಲಿ ಆಹ್ವಾನಿಸುತ್ತಿಲ್ಲ ಎಂದು ದೂರಿದರು. ಈ ವೇಳೆ ಮಧ್ಯ ಪ್ರವೇಶಿಸಿ ಮಾತನಾಡಿದ ಜಿಲ್ಲಾ ಅಧ್ಯಕ್ಷರು ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಕ್ರಮ ವಹಿಸಲಾಗುವುದು ಎಂದರು.

ಶಶಿಧರ್ ಮಾತನಾಡಿ, ಜಿಲ್ಲೆಯಲ್ಲಿ ಯುವನಿಧಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ವಿದ್ಯಾರ್ಥಿಗಳ ಸಂಖ್ಯೆ ಬಹಳ ಕಡಿಮೆ ಇದ್ದು, ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಅಧಿಕಾರಿಗಳು ಮತ್ತಷ್ಟು ಮುತುವರ್ಜಿಯಿಂದ ಕೆಲಸ ನಿರ್ವಹಿಸುವಂತೆ ಒತ್ತಾಯಿಸಿದರು. ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಅಧಿಕಾರಿ ಮಂಜುನಾಥ್ ಮಾತನಾಡಿ, ಜಿಲ್ಲೆಯ ಪ್ರತಿ ಪದವಿ ಕಾಲೇಜಿನಲ್ಲಿಯೂ ವಿಶೇಷ ಅಭಿಯಾನ ಮತ್ತು ಬ್ಯಾನರ್ ಅಳವಡಿಸಿ ಮಾಹಿತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಪ್ರಚಾರ ಕಾರ್ಯ ಕೈಗೊಳ್ಳಲಾಗುವುದು ಎಂದರು.

ಸಮಿತಿ ಸದಸ್ಯ ಮಂದ್ರೀರ ಮೋಹನ್ ದಾಸ್ ಮಾತನಾಡಿ, ಕೊಡಗು ಮಾತ್ರವಲ್ಲದೆ ಕೊಡಗಿನ ಮೂಲದ ವಿದ್ಯಾರ್ಥಿಗಳು ಬೇರೆ ಜಿಲ್ಲೆಯಲ್ಲಿ ಪದವಿ ಮುಗಿಸಿರುತ್ತಾರೆ. ಅಂತಹ ವಿದ್ಯಾರ್ಥಿಗಳ ಮಾಹಿತಿಯನ್ನು ಸಹ ಕಲೆ ಹಾಕಿ ಅವರಿಗೂ ಯೋಜನೆಯ ಲಾಭ ತಲುಪುವಂತೆ ಕ್ರಮ ವಹಿಸಬೇಕು ಎಂದರು.

ಸಭೆಯಲ್ಲಿ ಉಪಾಧ್ಯಕ್ಷರಾದ ಶರಿ ಗಿರೀಶ್, ಕೆ.ಸಿ.ಭೀಮಯ್ಯ, ನಾಸೀರ್, ಪಂಕಜ, ಸದಸ್ಯರಾದ ಎಸ್.ಕೆ.ಸುಂದರ, ಕೆ.ಎಂ.ಬಶೀರ್, ಮುಸ್ತಫ, ಪಿ.ಎಲ್. ಸುರೇಶ್, ಧನ್ಯ ರವೀಂದ್ರ, ಕೆ.ಜಿ.ಪೀಟರ್, ಕಾಂತರಾಜು, ಕಾಳಿಮಾಡ ಪ್ರಶಾಂತ್, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.