ಸೋಮವಾರಪೇಟೆ, ಆ. ೨೯: ತಾಲೂಕಿನ ಕಿರಗಂದೂರು ಹಾಗೂ ಐಗೂರು ಗ್ರಾಮ ಪಂಚಾಯಿತಿಗೆ ಒಳಪಟ್ಟಂತೆ ಒಂದೂವರೆ ಕೋಟಿ ವೆಚ್ಚದ ಕಾಂಕ್ರಿಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು.

ಐಗೂರು ಗ್ರಾಮದಿಂದ ಕಿರಗಂದೂರು ಸಂಪರ್ಕಿಸುವ ರಸ್ತೆಯನ್ನು ಕಾಂಕ್ರಿಟೀಕರಣಗೊಳಿಸುವ ರೂ. ೧ ಕೋಟಿ ವೆಚ್ಚದ ಕಾಮಗಾರಿ ಹಾಗೂ ಕಿರಗಂದೂರು ಗ್ರಾಮದಿಂದ ಹರಗ ಸಂಪರ್ಕಿಸುವ ೫೦ ಲಕ್ಷ ವೆಚ್ಚದ ಕಾಮಗಾರಿಗಳಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು.

ಕಳೆದ ಹಲವು ತಿಂಗಳ ಹಿಂದೆಯೇ ರಸ್ತೆ ನಿರ್ಮಾಣ ಕಾಮಗಾರಿಗೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿತ್ತು. ಮೇ ಕೊನೆಯ ವಾರದಲ್ಲಿಯೇ ಭಾರೀ ಮಳೆಯಾದ್ದರಿಂದ ಭೂಮಿ ಪೂಜೆ ನಡೆಸಲು ಸಾಧ್ಯವಾಗಿರಲಿಲ್ಲ. ಇದೀಗ ಮಳೆ ಕಡಿಮೆಯಾಗುತ್ತಿರುವುದರಿಂದ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕರು ಹೇಳಿದರು.

ಗ್ಯಾರಂಟಿ ಯೋಜನೆಗಳ ಮೂಲಕ ಸಮಾಜದ ಎಲ್ಲಾ ವರ್ಗದ ಮಂದಿಗೆ ಸರ್ಕಾರ ಆರ್ಥಿಕ ಸ್ವಾವಲಂಬನೆ ನೀಡುತ್ತಿದೆ. ಇದರೊಂದಿಗೆ ಮೂಲಭೂತ ಸೌಕರ್ಯಗಳ ಉನ್ನತೀಕರಣದೊಂದಿಗೆ ಅಭಿವೃದ್ಧಿ ಕಾರ್ಯಗಳಿಗೂ ಅನುದಾನ ನೀಡುತ್ತಿದೆ ಎಂದು ಡಾ. ಮಂತರ್ ಗೌಡ ಹೇಳಿದರು.

ಕಾಮಗಾರಿ ನಡೆಯುವ ಸಂದರ್ಭ ಸ್ಥಳೀಯರು ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ರಸ್ತೆಗೆ ಅಗತ್ಯವಿರುವ ಸ್ಥಳಾವಕಾಶ ಕಲ್ಪಿಸಬೇಕು. ಗ್ರಾಮದಿಂದ ಗ್ರಾಮ ಸಂಪರ್ಕಿಸುವ ರಸ್ತೆಗಳು ಅಭಿವೃದ್ಧಿಯಾದರೆ ಭವಿಷ್ಯದಲ್ಲಿ ಗ್ರಾಮಗಳು ಅಭಿವೃದ್ಧಿಗೆ ತೆರೆದುಕೊಳ್ಳುತ್ತವೆ. ಈ ನಿಟ್ಟಿನಲ್ಲಿ ಸರ್ವಋತು ರಸ್ತೆಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ಅನುದಾನ ಒದಗಿಸುತ್ತಿದೆ ಎಂದು ಶಾಸಕರು ತಿಳಿಸಿದರು.

ಭೂಮಿ ಪೂಜೆ ಸಂದರ್ಭ ಗ್ರಾಮದ ಪ್ರಮುಖರಾದ ಎಸ್.ಎಂ. ಚಂಗಪ್ಪ, ರೋಷನ್ ಪೂವಯ್ಯ, ತಾ.ಪಂ. ಮಾಜಿ ಅಧ್ಯಕ್ಷ ಕೆ.ಎಂ. ಲೋಕೇಶ್, ಅಕ್ರಮ ಸಕ್ರಮ ಸಮಿತಿ ಸದಸ್ಯ ಬಿ.ಬಿ. ಸತೀಶ್, ತಾಲೂಕು ಕೆಡಿಪಿ ಸಮಿತಿ ಸದಸ್ಯೆ ಸಬಿತಾ ಚನ್ನಕೇಶವ, ಲೋಕೋಪಯೋಗಿ ಇಲಾಖಾ ಅಭಿಯಂತರ ವಿಜಯಕುಮಾರ್, ಕೀರ್ತನ್ ಸೇರಿದಂತೆ