ವೀರಾಜಪೇಟೆ, ಆ. ೨೯: ಕ್ರೀಡೆಯಿಂದ ದೈಹಿಕ ಆರೋಗ್ಯ ವೃದ್ಧಿಸುವುದರೊಂದಿಗೆ ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ಪಟ್ಟಣದ ಪ್ರಗತಿ ಶಾಲೆ ಆವರಣದಲ್ಲಿ ವೀರಾಜಪೇಟೆ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೈಹಿಕ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆಯು ಬಹುಮುಖ್ಯ. ಪ್ರತಿಯೊಂದು ಕ್ರೀಡೆಯಲ್ಲಿಯೂ ಸೋಲು ಗೆಲುವು ಸಹಜ ಆದರೆ, ಭಾಗವಹಿಸುವಿಕೆ ಅತಿ ಮುಖ್ಯವಾಗಿರುತ್ತದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮನ್ನು ಕ್ರೀಡೆಯಲ್ಲಿ ತೊಡಗಿಸಿಕೊಂಡು ಸಾಧನೆ ಮಾಡಿ ಜೀವನದಲ್ಲಿ ಯಶಸ್ಸು ಕಾಣುವಂತಾಗಬೇಕೆAದು ಕರೆ ನೀಡಿದರು. ಪ್ರಗತಿ ಶಾಲೆಯ ಸಂಸ್ಥಾಪಕ ಮಾದಂಡ ಎಸ್ ಪೂವಯ್ಯ ಕ್ರೀಡಾಕೂಟವನ್ನು ಉದ್ದೇಶಿಸಿ ಮಾತನಾಡಿದರು. ಶಾಲೆಯ ಆಡಳಿತ ಅಧಿಕಾರಿ ಮಾದಂಡ ತಿಮ್ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೇದಿಕೆಯಲ್ಲಿ ಶಾಲೆಯ ವ್ಯವಸ್ಥಾಪಕಿ ಸುಷ್ಮ ತಿಮ್ಮಯ್ಯ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಹಾ ತಬ್ಸುಂ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ಜಲೀಲ್, ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ್, ವಿವಿಧ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿಗಳು, ಪುರಸಭೆ ಸದಸ್ಯರಾದ ರಾಜೇಶ್, ಮತೀನ್, ಕಾಂಗ್ರೆಸ್ ಮುಖಂಡರಾದ ಜೋಕಿಮ್, ಕುಂಡಚೀರ ಮಂಜು ದೇವಯ್ಯ, ಎ.ವಿ ಮಂಜುನಾಥ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.