ಮಡಿಕೇರಿ, ಆ. ೩೦: ಮುಖ್ಯಮಂತ್ರಿ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅಧ್ಯಕ್ಷತೆಯಲ್ಲಿ ಸೆ. ೧ ರಂದು ಬೆಳಿಗ್ಗೆ ೧೧ ಗಂಟೆಗೆ ಮಡಿಕೇರಿ ತಾಲೂಕಿನ ಭಾಗಮಂಡಲ ಹೋಬಳಿಯ ಕರಿಕೆ ಗ್ರಾಮದ ವಿ.ಎಸ್.ಎಸ್.ಎನ್. ಸಭಾಂಗಣದಲ್ಲಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಡಿಕೇರಿ ತಹಶೀಲ್ದಾರ್ ಶ್ರೀಧರ್ ತಿಳಿಸಿದ್ದಾರೆ.