ಮಡಿಕೇರಿ, ಆ. ೩೦: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕರಿಕೆಯಲ್ಲಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಸೆ. ೧ ರಂದು ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ಶಾಸಕÀ ಎ.ಎಸ್.ಪೊನ್ನಣ್ಣ, ಶಾಸಕ ಡಾ.ಮಂತರ್ ಗೌಡ, ಸಂಸದÀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್. ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರಿಕೆ ಗ್ರಾ.ಪಂ. ಅಧ್ಯಕ್ಷ ಎನ್. ಬಾಲಚಂದ್ರನ್ ನಾಯರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಮಡಿಕೇರಿ ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಂ.ಜಿ.ಮೋಹನ್ ದಾಸ್, ಸರ್ಕಾರದ ಕಾರ್ಯದರ್ಶಿ ಡಿ.ರಂದೀಪ್, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಯೋಗೇಶ್ ಟಿ., ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.