ಕುಶಾಲನಗರ, ಆ. ೨೮: ಕುಶಾಲನಗರ ಕೈಗಾರಿಕಾ ಬಡಾವಣೆಯ ಕಾಫಿ ಸಂಸ್ಕರಣ ಘಟಕದಲ್ಲಿ ೫೦ ಲಕ್ಷಕ್ಕೂ ಅಧಿಕ ಮೌಲ್ಯದ ಕಾಫಿ ಕಳವು ಮಾಡಿದ ಘಟನೆ ನಡೆದಿದ್ದು, ಮೂರು ಮಂದಿ ಕಾರ್ಮಿಕರನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಕೈಗಾರಿಕಾ ಬಡಾವಣೆಯ ಉಮಾ ಕಾಫಿ ಸಂಸ್ಕರಣ ಘಟಕದಲ್ಲಿ ಸುಮಾರು ಆರು ತಿಂಗಳ ಅವಧಿಯಲ್ಲಿ ರೂ ೫೦ ಲಕ್ಷಕ್ಕೂ ಅಧಿಕ ಮೌಲ್ಯದ ಕಾಫಿ ಕಳವು ಬೆಳಕಿಗೆ ಬಂದಿದೆ.
ಪ್ರಕರಣದಲ್ಲಿ ಸ್ಥಳೀಯ ಹಾಗೂ ಉತ್ತರ ಭಾರತದ ಕಾರ್ಮಿಕರು ಭಾಗಿಯಾಗಿದ್ದು, ಈ ಸಂಬAಧ ಸಂಸ್ಥೆಯ ವ್ಯವಸ್ಥಾಪಕ ಗಣೇಶ್ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಂಸ್ಥೆಯ ಸಿಸಿ ಕ್ಯಾಮೆರಾ ದೃಶ್ಯಾವಳಿಯ ಆಧಾರದಲ್ಲಿ ಆರೋಪಿಗಳ ಪತ್ತೆ ಕಾರ್ಯ ನಡೆದಿದೆ.
ಓರ್ವ ಸ್ಥಳೀಯ ಮತ್ತು ಬಿಹಾರ ಮೂಲದ ಇಬ್ಬರು ಕಾರ್ಮಿಕರು ಮತ್ತು ಆಟೋ ಚಾಲಕನೋರ್ವ ಈ ಕಳವು ಪ್ರಕರಣದಲ್ಲಿದ್ದು, ಕುಶಾಲನಗರ ಗ್ರಾಮಾಂತರ ಪೊಲೀಸರು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
-ಚಂದ್ರಮೋಹನ್