ಗೋಣಿಕೊಪ್ಪಲು, ಆ. ೩೧: ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಟ್ಟಂದಿ ಪ್ರಾಥಮಿಕ ಆರೋಗ್ಯ ಕೇಂದ್ರದ ರಕ್ಷಾ ಸಮಿತಿ ಸಭೆ ಸಮಿತಿಯ ಅಧ್ಯಕ್ಷ ಕೊಲ್ಲಿರ ಬೋಪಣ್ಣ ಅಧ್ಯಕ್ಷತೆಯಲ್ಲಿ ಜರುಗಿತು. ಆಸ್ಪತ್ರೆಯ ಅಭಿವೃದ್ಧಿ ಹಾಗೂ ರೋಗಿಗಳಿಗೆ ಲಭಿಸುವ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಯಿತು.

ಗ್ರಾಮೀಣ ಭಾಗದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ಥಳೀಯರಿಗೆ ಉತ್ತಮ ರೀತಿಯಲ್ಲಿ ಆಸ್ಪತ್ರೆಯ ಸೇವೆ ಲಭಿಸುತ್ತಿರುವ ಬಗ್ಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೊಲ್ಲಿರ ಬೋಪಣ್ಣ ಶ್ಲಾಘನೆ ವ್ಯಕ್ತಪಡಿಸಿದರು. ಸಕಾಲದಲ್ಲಿ ವೈದ್ಯರು ಸ್ಥಳೀ ಯರಿಗೆ ಲಭ್ಯವಾಗುತ್ತಿರುವುದರಿಂದ ಆರೋಗ್ಯ ಸಮಸ್ಯೆಗೆ ಪರಿಹಾರ ಲಭಿಸುತ್ತಿವೆ. ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯಗಳನ್ನು ಸುತ್ತಮುತ್ತಲಿನ ಗ್ರಾಮಸ್ಥರು ಪಡೆದುಕೊಳ್ಳಲು ಕರೆ ನೀಡಿದರು.

ಸಭೆಯಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಹೆಚ್.ಆರ್.ಯತಿರಾಜ್, ಸಿಡಿಪಿಒ ಬಿ.ರೇಣುಕಾ ಹೊಸಮನಿ, ಕುಟ್ಟಂದಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಕೆ.ಎ. ದ್ವೀಪ, ಹಾತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆ.ಬಿ. ನಮಿತ, ಆರ್ಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆ.ಎಂ.ಫಾತಿಮಾ, ಜನಪ್ರತಿನಿಧಿಗಳಾದ ಚೇರಂಡ ಕ್ರಾಂತಿ, ವಿಷ್ಮಾ, ವೈದ್ಯಾಧಿಕಾರಿಗಳಾದ ಶರತ್ ಕುಮಾರ್ ಸೇರಿದಂತೆ ಅನೇಕ ಪ್ರಮುಖರು ಪಾಲ್ಗೊಂಡಿದ್ದರು.