ಚೆಯ್ಯಂಡಾಣೆ, ಆ. ೩೧: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಕುಂಜಿಲ ಗ್ರಾಮದ ಚಿತ್ರಬಾನು ಎಂಬವರ ಪತ್ನಿ ವಿದ್ಯಾ (೫೫) ಮೃತ ದುರ್ದೈವಿ. ಆ. ೨೪ ರಂದು ಹ್ಯುಂಡೈ ಐ-೧೦ ಕಾರಿನಲ್ಲಿ ವಿದ್ಯಾ ಸೇರಿದಂತೆ ಪತಿ, ಮೊಮ್ಮಗಳು ತೆರಳುತ್ತಿದ್ದಾಗ ನಾಪೋಕ್ಲು ಮೂರ್ನಾಡು ಮುಖ್ಯರಸ್ತೆಯ ಹೊದವಾಡ ಗ್ರಾಮದ ಬೊಳಿಬಾಣೆ ಎಂಬಲ್ಲಿ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಅಪಘಾತ ಸಂಭವಿಸಿತ್ತು. ಗಂಭೀರ ಗಾಯಗೊಂಡಿದ್ದ ವಿದ್ಯಾ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಸುಳ್ಯದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾ ಅವರು ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.