ಸೋಮವಾರಪೇಟೆ, ಆ. ೩೧: ಯಂಗ್ ಇಂಡಿಯನ್ಸ್ ಫಾಮರ‍್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ಹುದುಗೂರು ಗ್ರಾಮದ ಶ್ರೀ ಕಾಳಿಕಾಂಬ ಯುವಕ ಸಂಘದ ಆಶ್ರಯದಲ್ಲಿ, ಹುದುಗೂರಿನಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಣಾ ಸಮಾರಂಭ ಯುವಕ ಸಂಘದ ಮೈದಾನದಲ್ಲಿ ನಡೆಯಿತು.

ಗ್ರಾಮದ ಐಮುಡಿಯಂಡ ಗಣೇಶ್ ಅವರ ಗದ್ದೆಯಲ್ಲಿ ನಡೆದ ಪುರುಷರ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಟೀಂ ಪೊನ್ನಂಪೇಟೆ ತಂಡ ಪ್ರಥಮ, ಕೂಡುಮಂಗಳೂರು ಮಾರುತಿ ಫ್ರೆಂಡ್ಸ್ ತಂಡ ದ್ವಿತೀಯ ಸ್ಥಾನ ಗಳಿಸಿತು. ಹಗ್ಗಜಗ್ಗಾಟದಲ್ಲಿ ಸಂಪಾಜೆಯ ಆದರ್ಶ್ ಫ್ರೆಂಡ್ಸ್ ತಂಡ ಪ್ರಥಮ, ಟೀಮ್ ಲಯನ್ಸ್ ರ‍್ವತ್ತೊಕ್ಲು ತಂಡ ದ್ವಿತೀಯ ಸ್ಥಾನ ಗಳಿಸಿತು.

ಮಹಿಳಾ ವಿಭಾಗದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಭಾಗಮಂಡಲದ ಟೀಮ್ ಕಾವೇರಿ ತಂಡ

ಪ್ರಥಮ ಸ್ಥಾನ, ಯಡವನಾಡು ಶಿವ ಬಸವೇಶ್ವರ ತಂಡ ದ್ವಿತೀಯ ಸ್ಥಾನ ಪಡೆಯಿತು. ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಫಿಯನ್ನು ಅತಿಥಿಗಳು ವಿತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಂಗ್ ಇಂಡಿಯನ್ ಫಾಮರ‍್ಸ್ ಅಸೋಸಿಯೇಷನ್ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ, ಸೋಮವಾರಪೇಟೆ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಅರುಣ್ ಕೊತ್ನಳ್ಳಿ, ಉದ್ಯಮಿ ಕೀರ್ತಿಗೌಡ, ಮಹೇಶ್ ಹರಗ, ಬಿಜೆಪಿ ಮುಖಂಡರಾದ ಚಂದ್ರಶೇಖರ್ ಹೇರೂರು, ಸಾಂದೀಪನಿ ಶಾಲಾ ಮುಖ್ಯಸ್ಥ ಲಿಖಿತ್ ದಾಮೋಧರ್, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್, ಶ್ರೀ ಕಾಳಿಕಾಂಬ ಯುವಕ ಸಂಘದ ಅಧ್ಯಕ್ಷ ಐಮುಡಿಯಂಡ ಶರತ್, ಯಿಫಾ ಸಂಘಟನೆಯ ಉಪಾಧ್ಯಕ್ಷ ಹರ್ಷಿತ್ ಶಿವಪ್ಪ, ಕಾರ್ಯದರ್ಶಿ ಸಜನ್ ಮಂದಣ್ಣ, ಖಜಾಂಚಿ ಮೋಹಿತ್ ತಿಮ್ಮಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದು, ಬಹುಮಾನ ವಿತರಿಸಿದರು.