ವೀರಾಜಪೇಟೆ, ಆ. ೩೧: ಅವೈಜ್ಞಾನಿಕವಾಗಿ ರಸಗೊಬ್ಬರ ಮತ್ತು ಕೀಟನಾಶಕದ ಬಳಕೆ ಮಾಡುತ್ತಿರುವುದರಿಂದ ಆಹಾರ ರಾಸಾಯನಿಕ ಯುಕ್ತವಾಗುತ್ತಿದೆ ಎಂದು ಎಫ್.ಎಂ.ಕೆ.ಎA.ಸಿ ಕಾಲೇಜಿನ ಅರ್ಥಶಾಸ್ತç ವಿಭಾಗದ ಪ್ರಾಧ್ಯಾಪಕ ಡಾ. ಇ. ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು .

ವೀರಾಜಪೇಟೆ ಕಾವೇರಿ ಪದವಿ ಕಾಲೇಜಿನ ಐಕ್ಯೂಎಸಿ ಹಾಗೂ ಅರ್ಥಶಾಸ್ತç ವಿಭಾಗದ ಸಹಯೋಗದಲ್ಲಿ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕೊಡಗು ಜಿಲ್ಲೆಯಲ್ಲಿ ಭತ್ತ ಬೆಳೆಯ ಅವಕಾಶಗಳು ಹಾಗೂ ಸವಾಲುಗಳು ಎಂಬ ವಿಷಯದ ಕುರಿತ ವಿಚಾರ ಸಂಕಿರಣ ಉದ್ದೇಶಿಸಿ ಮಾತನಾಡಿದರು.

ಕೃಷಿಯಲ್ಲಿ ತ್ವರಿತ ಪ್ರಗತಿ ಸಾಧಿಸಬೇಕು. ಹೆಚ್ಚು ಆದಾಯವನ್ನು ಗಳಿಸುವುದರೊಂದಿಗೆ ಕಡಿಮೆ ಶ್ರಮದ ಬಳಕೆ ಆಗಬೇಕೆಂಬ ಉದ್ದೇಶದಿಂದ ಇತ್ತೀಚೆಗೆ ಕೀಟನಾಶಕ, ರಾಸಾಯನಿಕ ಗೊಬ್ಬರಗಳ ಬಳಕೆ ಹೆಚ್ಚುತ್ತಿದ್ದು ಇದು ನಮ್ಮ ಆರೋಗ್ಯ, ಸುತ್ತಮುತ್ತಲಿನ ಪರಿಸರ ಹಾಗೂ ಪ್ರಾಣಿ ಸಂಕುಲಗಳು ಕ್ಷೀಣಿಸಿ ಹೋಗಲು ಪ್ರಮುಖ ಕಾರಣ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ ಆರ್ ಸಲ್ದಾನ ಅವರು, ಕೊಡಗು ಕೃಷಿ ಪ್ರಧಾನವಾದ ಜಿಲ್ಲೆಯಾಗಿದ್ದು ಕೃಷಿಯು ನಮ್ಮ ಹಿರಿಯರಿಂದ ಬಳುವಳಿಯಾಗಿ ಬಂದ ಒಂದು ಸಂಸ್ಕöÈತಿ. ಅದರಲ್ಲೂ ಭತ್ತದ ಬೆಳೆ ನಮ್ಮ ಆಚಾರ ವಿಚಾರ ಹಬ್ಬ ಹರಿ ದಿನಗಳೊಂದಿಗೆ ನಿಕಟ ಸಂಬAಧವನ್ನು ಹೊಂದಿದೆ. ಇತ್ತೀಚಿನ ದಿನಗಳಲ್ಲಿ ಭತ್ತದ ಗದ್ದೆಗಳನ್ನು ಪಾಳು ಬಿಡುತ್ತಿರುವುದು ಬೇಸರದ ಸಂಗತಿಯಾಗಿದ್ದು, ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಹುತ್ತರಿ ಅಂತಹ ಕೃಷಿ ಪ್ರಧಾನ ಹಬ್ಬ ಆಚರಿಸಲು ಬೇರೆ ಜಿಲ್ಲೆಗಳಿಂದ ಕದಿರು ತರುವ ಪರಿಸ್ಥಿತಿ ಎದುರಾಗಬಹುದು ಆದ್ದರಿಂದ ಯುವ ಜನತೆ ಕೃಷಿಯ ಕಡೆಗೆ ಒಲವನ್ನು ತೋರಿಸಿ ವಿದ್ಯಾಭ್ಯಾಸದೊಂದಿಗೆ ಕೃಷಿ ಚಟುವಟಿಕೆಗಳನ್ನು ಸಹ ಕಲಿಯಬೇಕೆಂದರು.

ಅಂತಿಮ ಬಿ.ಎ.ವಿದ್ಯಾರ್ಥಿನಿ ಪಿ. ಅಂಜಲಿ, ಅಂತಿಮ ಬಿಕಾಂ ವಿದ್ಯಾರ್ಥಿನಿಯರಾದ ಬಿ.ಎಸ್.ರಕ್ಷಿತಾ, ಮುತ್ತಮ್ಮ, ದ್ವಿತೀಯ ಬಿ.ಎ ವಿದ್ಯಾರ್ಥಿನಿ ದೀಕ್ಷ ಕೊಡಗಿನಲ್ಲಿ ಭತ್ತದ ಬೆಳೆಯ ಅವಕಾಶಗಳು ಹಾಗೂ ಸವಾಲುಗಳು ಎಂಬ ವಿಷಯದ ಕುರಿತು ವಿಚಾರ ಮಂಡನೆ ಮಾಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಪ್ರಿಯ ಮುದ್ದಪ್ಪ, ಅರ್ಥಶಾಸ್ತç ವಿಭಾಗದ ಮುಖ್ಯಸ್ಥ ನಾಗರಾಜು, ಕಾಲೇಜಿನ ಉಪ ಪ್ರಾಂಶುಪಾಲೆ ಡಾ. ವೀಣಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕ ವರ್ಗ, ಆಡಳಿತಾತ್ಮಕ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.