ವೀರಾಜಪೇಟೆ, ಆ. ೩೧: ವಿಧಾನಸಭಾ ಕ್ಷೇತ್ರದ, ಪೊನ್ನಂಪೇಟೆ ತಾಲೂಕು ಗೋಣಿಕೊಪ್ಪಲುವಿನ ವಿದ್ಯಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಬಸ್ ತಂಗುದಾಣವನ್ನು, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಉದ್ಘಾಟಿಸಿದರು.
ರೂ. ೬ ಲಕ್ಷ ೫೦ ಸಾವಿರ ಅನುದಾನದಲ್ಲಿ ನಿರ್ಮಾಣಗೊಂಡ ಬಸ್ ತಂಗುದಾಣವು, ಸ್ಥಳೀಯ ಪ್ರಯಾಣಿಕರಿಗೆ ಅನುಕೂಲ ಮಾಡುವುದರೊಂದಿಗೆ, ಮಳೆ ಹಾಗೂ ಬಿಸಿಲಿನ ತಾಪಕ್ಕೆ ರಕ್ಷಣೆ ಒದಗಿಸುವಲ್ಲಿ ಸಹಕಾರಿಯಾಗಲಿದೆ. ಈ ಭಾಗದ ಅನೇಕ ಜನರು ಹಾಗೂ ಕಾರ್ಮಿಕರು ತಮ್ಮ ದಿನ ನಿತ್ಯದ ಕೆಲಸ ಕಾರ್ಯಗಳಿಗೆ ಬಸ್ ಪ್ರಯಾಣವನ್ನೇ ಅವಲಂಬಿಸುತ್ತಿದ್ದು, ಪ್ರಯಾಣಿಕರಿಗೆ ಇದು ಅನುಕೂಲ ಒದಗಿಸಲಿದೆ ಎಂದು ಶಾಸಕರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷರಾದ ಕುಲ್ಲಚಂಡ ಪ್ರಮೋದ್ ಗಣಪತಿ, ಉಪಾಧ್ಯಕ್ಷೆ ಮಂಜುಳಾ, ಕೋಲಿರ ಜಯ, ವಾಸು, ನಾಯಂದಿರ ಶಿವಾಜಿನಗರ ಉಪಾಧ್ಯಕ್ಷರು, ಧ್ಯಾನ್ ಸುಬ್ಬಯ್ಯ, ಕುಸುಮ, ಧನ್ಯ, ಗಣೇಶ್ ಕೆ ಎಂ, ಗ್ಯಾರಂಟಿ ಅನುಷ್ಠಾನ ಸದಸ್ಯರು ಕಲೀದ್, ಪ್ರಮುಖರು ಉಪಸ್ಥಿತರಿದ್ದರು.