ನಾಪೋಕ್ಲು, ಆ. ೩೧: ಕೊಡಗಿನ ಇಬ್ಬರು ವಿದ್ಯಾರ್ಥಿಗಳು ಸ್ಕೌಟ್ಸ್ ಅಂಡ್ ಗೈಡ್ಸ್ನಲ್ಲಿ ರಾಜ್ಯ ಪುರಸ್ಕಾರ ಪಡೆದಿದ್ದಾರೆ.

೧೦ ರಿಂದ ೧೭ ವರ್ಷ ವಯೋಮಿತಿಯ ಸ್ಕೌಟ್‌ನಲ್ಲಿ ಪಂದಿಕAಡ ಪಿ.ಕಾರ್ತಿಕ್ ಹಾಗೂ ಗೈಡ್ಸ್ನಲ್ಲಿ ತೋಟಂಬೈಲು ಯಾಮಿನಿ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಡಿಕೇರಿಯಲ್ಲಿ ಜರುಗಿದ ಸ್ವಾತಂತ್ರö್ಯ ದಿನಾಚರಣೆ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು, ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜಾ, ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಈ ಸಂದರ್ಭ ಸ್ಕೌಟ್ ಗೈಡ್‌ನ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ, ಡಿ.ಡಿ.ಪಿ.ಐ. ರಂಗಧಾಮಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಅರಮೇರಿ ಎಸ್‌ಎಂಎಸ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಪಿ. ಕಾರ್ತಿಕ್ ಹಾಗೂ ತೋಟಂಬೈಲು ಯಾಮಿನಿ ಕ್ಯಾಪ್ಟನ್ ಮೈತ್ರಿ ಅವರಿಂದ ತರಬೇತಿ ಪಡೆದಿದ್ದಾರೆ.