ಮಡಿಕೇರಿ, ಸೆ. ೧: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಕೆಲವರು ಷಡ್ಯಂತ್ರ ರೂಪಿಸಿ ಸನ್ನಿಧಿಗೆ ಹಾಗೂ ಹಿಂದೂ ಧರ್ಮಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಧರ್ಮಸ್ಥಳ ಚಲೋ ಹೋರಾಟದ ಭಾಗವಾಗಿ ಜಿಲ್ಲೆಯಿಂದ ನೂರಾರು ಕಾರ್ಯಕರ್ತರು ಹಾಗೂ ಭಕ್ತರು ಧರ್ಮಸ್ಥಳಕ್ಕೆ ತೆರಳಿದರು. ಮಡಿಕೇರಿ, ವೀರಾಜಪೇಟೆ, ಗೋಣಿಕೊಪ್ಪ, ಸೋಮವಾರಪೇಟೆ ಸೇರಿದಂತೆ ವಿವಿಧೆಡೆಗಳಿಂದ ವಾಹನದಲ್ಲಿ ತೆರಳಿದ ಕಾರ್ಯಕರ್ತರು ಕೊಯನಾಡು ತಲುಪಿ ಅಲ್ಲಿನ ಮಹಾಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬಳಿಕ ಧರ್ಮಸ್ಥಳ ಕಡೆ ಪ್ರಯಾಣ ಬೆಳೆಸಿ ಅಲ್ಲಿ ನಡೆಯುತ್ತಿದ್ದ ಸಮಾವೇಶದಲ್ಲಿ ಪಾಲ್ಗೊಂಡರು.

ಮಾಜಿ ಶಾಸಕರುಗಳಾದ ಕೆ.ಜಿ. ಬೋಪಯ್ಯ, ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಎಂಎಲ್‌ಸಿಗಳಾದ ಎಸ್.ಜಿ. ಮೇದಪ್ಪ, ಸುನಿಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ನೆಲ್ಲೀರ ಚಲನ್, ವಕ್ತಾರ ಬಿ.ಕೆ. ಅರುಣ್ ಕುಮಾರ್, ವಿವಿಧ ಮಂಡಲ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.