ಕೂಡಿಗೆ, ಸೆ. ೧: ರಾಜ್ಯದಲ್ಲೇ ಪ್ರಥಮವಾಗಿ ಆರಂಭಗೊAಡಿರುವ ಕೂಡಿಗೆ ಡೈರಿಯನ್ನು ಹಾಸನ ಹಾಲು ಒಕ್ಕೂಟದ ವತಿಯಿಂದ ರೂ. ೨೦ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಕ್ರಿಯಾ ಯೋಜನೆಯ ಸಿದ್ಧತೆ ನಡೆದಿದೆ ಎಂದು ಹಾಸನ ಹಾಲು ಒಕ್ಕೂಟದ ಅಧ್ಯಕ್ಷ ಲೋಕೋಪಯೋಗಿ ಇಲಾಖೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಒಕ್ಕೂಟದ ವಾರ್ಷಿಕ ಸಭೆಯಲ್ಲಿ ತಿಳಿಸಿದರು.
ಕೂಡಿಗೆ ಡೈರಿಯ ಹಳೆಯ ಕಟ್ಟಡಗಳನ್ನು ಕೆಡವಿ ಮುಂದಿನ ದಿನಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ನೂತನ ಕಟ್ಟಡ ನಿರ್ಮಾಣ ಮಾಡಿ ಡೈರಿಯನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಜಿಲ್ಲಾ ನಿರ್ದೇಶಕ ಕೆ.ಕೆ. ಹೇಮಂತ್ ಕುಮಾರ್, ಒಕ್ಕೂಟದ ಪ್ರಧಾನ ವ್ಯವಸ್ಥಾಪಕ ಮಹೇಶ್, ಸೇರಿದಂತೆ ಒಕ್ಕೂಟದ ನಿರ್ದೇಶಕರು ಹಾಜರಿದ್ದರು.