ಕುಶಾಲನಗರ, ಸೆ. ೧: ಮಾಜಿ ಪ್ರಧಾನಿ ಇಂದಿರಾಗಾAಧಿ ಅವರ ರಾಜಕೀಯ ಪುನರ್‌ಜೀವನಕ್ಕೆ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ ಪಾತ್ರ ಅಪಾರ ಎಂದು ಮಡಿಕೇರಿ ಸರಸ್ವತಿ ಡಿ.ಎಡ್. ಕಾಲೇಜಿನ ಪ್ರಾಂಶುಪಾಲ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಕುಶಾಲನಗರದಲ್ಲಿ ತಾಲೂಕು ಆಡಳಿತ ಮತ್ತು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಆಶ್ರಯದಲ್ಲಿ ಗಂಧದಕೋಟೆ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ನಡೆದ ೧೧೦ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಮಾತನಾಡಿದರು.
ಇಂದಿರಾಗಾAಧಿ ಅವರು ರಾಜಕೀಯ ಸಂಕಷ್ಟದಲ್ಲಿದ್ದ ವೇಳೆ ಅವರನ್ನು ಕರ್ನಾಟಕದ ಚಿಕ್ಕಮಗಳೂರು ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ನಿಲ್ಲಿಸಿ ಗೆಲುವು ಸಾಧಿಸುವಂತೆ ಮಾಡಿದ ದೇವರಾಜ ಅರಸು ಅವರು ರಾಜ್ಯ ಅಲ್ಲದೆ ರಾಷ್ಟç ರಾಜಕಾರಣದಲ್ಲಿ ಕೂಡ ತಮ್ಮ ಪಾತ್ರವಹಿಸಿದ್ದರು ಎಂದು ಹೇಳಿದರು.
ರಾಜ್ಯದಲ್ಲಿ ಉಳುವವನೇ ಭೂಮಿಯ ಒಡೆಯ ಎಂಬ ಮಸೂದೆ ಅಡಿಯಲ್ಲಿ ಕಾರ್ಮಿಕ ಬಡ ಜನರನ್ನು ಭೂಮಿ ಒಡೆಯನಾಗಿ ಪರಿವರ್ತನೆ ಮಾಡಿದ ಹಿಂದುಳಿದ ವರ್ಗಗಳ ಹರಿಕಾರ ಎಂದೇ ಖ್ಯಾತಿಯಾಗಿರುವ ದೇವರಾಜ ಅರಸು ಅವರ ಸಮಗ್ರ ಚಿಂತನೆಗಳ ಬಗ್ಗೆ ಮಾಹಿತಿ ಒದಗಿಸಿದರು.
ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಇದೇ ಸಂದರ್ಭ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಶ್ರೀದೇವಿ, ಹಿಂದುಳಿದ ವರ್ಗಗಳ ಅಧಿಕಾರಿ ಸ್ವಾಮಿ, ಕರ್ನಾಟಕ ಕಾವಲು ಪಡೆ ಜಿಲ್ಲಾಧ್ಯಕ್ಷ ಎಂ ಕೃಷ್ಣ, ವಜ್ರಕೃತ ರಘು ಮತ್ತಿತರರು ಇದ್ದರು. ವಸತಿ ನಿಲಯ ಮೇಲ್ವಿಚಾರಕರಾದ ವೈ.ಡಿ. ಆನಂದ್ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.