ಗೋಣಿಕೊಪ್ಪ ವರದಿ, ಸೆ. ೧ : ಕ್‌ಗ್ಗಟ್ಟ್ನಾಡ್ ಹಿರಿಯ ನಾಗರಿಕ ವೇದಿಕೆ ಮಹಾಸಭೆಯನ್ನು ಸೆ. ೨೨ ರಂದು ಪೊನ್ನಂಪೇಟೆ ಇಗ್ಗುತ್ತಪ್ಪ ಕೊಡವ ಸೌಹಾರ್ದ ಸಹಕಾರಿ ಸಂಘ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆ ಅಧ್ಯಕ್ಷ ಕೊಟ್ಟ್ಕತ್ತೀರ ಪಿ. ಸೋಮಣ್ಣ ತಿಳಿಸಿದರು.
ಬೆಳಿಗ್ಗೆ ೧೦ ಗಂಟೆಗೆ ಸಭೆ ಆರಂಭಗೊಳ್ಳಲಿದ್ದು, ವೇದಿಕೆ ಅಧ್ಯಕ್ಷ ಕೊಟ್ಟ್ಕತ್ತೀರ ಪಿ. ಸೋಮಣ್ಣ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸದಸ್ಯರುಗಳ ಮೊಮ್ಮಕ್ಕಳು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಪೂರ್ವಭಾವಿ ಸಭೆಯಲ್ಲಿ ತಿಳಿಸಿದರು.
ಇದೇ ಮೊದಲ ಬಾರಿಗೆ ಸುದೀರ್ಘ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ವ್ಯಕ್ತಿಗೆ ಕ್‌ಗ್ಗಟ್ಟ್ ನಾಡ್ ಮ್ಯಾನ್ ಆಫ್ ದ ಇಯರ್ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದ್ದು, ಸರ್ವೇ ಇಲಾಖೆಯಲ್ಲಿ ಎಡಿಎಲ್‌ಆರ್ ಆಗಿ ನಿವೃತ್ತಿ ಹೊಂದಿರುವ ಅಜ್ಜಿಕುಟ್ಟೀರ ಬಿ. ಭೀಮಯ್ಯ ಅವರಿಗೆ ಗೌರವ ನೀಡಲಾಗುವುದು. ಮಹಾಸಭೆಗೆ ವಿಶೇಷ ಆಹ್ವಾನಿತರಾಗಿ ಚೆಕ್ಕೇರ ಪೊನ್ನು ಪೂಣಚ್ಚ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ವೇದಿಕೆ ಜೀವಾವಧಿ ಅಧ್ಯಕ್ಷ ಕಾಟಿಮಾಡ ಜಿಮ್ಮಿ ಅಣ್ಣಯ್ಯ ಮಾತನಾಡಿ, ಕ್‌ಗ್ಗಟ್ಟ್ ನಾಡ್ ಮ್ಯಾನ್ ಆಫ್ ದ ಇಯರ್ ಪ್ರಶಸ್ತಿ ವೇದಿಕೆಗೆ ಹೆಚ್ಚು ಗೌರವ ತರಲಿದೆ. ಸಮಾಜ ಸೇವೆಯಲ್ಲಿ ಹೆಚ್ಚು ತೊಡಗಿಕೊಂಡಿರುವ ಹಿರಿಯರಿಗೆ ಮನ್ನಣೆ ಸಿಗುವಂತಾಗಲಿದೆ ಎಂದರು.
ಸಭೆಯಲ್ಲಿ ವೇದಿಕೆ ಕಾರ್ಯದರ್ಶಿ ಚೇಂದೀರ ಎಂ. ಬೋಪಣ್ಣ, ಸದಸ್ಯರಾದ ಮಾಣಿಪಂಡ ಪಾರ್ವತಿ ಜೋಯಪ್ಪ, ಕೇಚೇಟ್ಟಿರ ಕಾಮುಣಿ ಪೂಣಚ್ಚ, ಕೊಳ್ಳಿಮಾಡ ಚಿಪ್ಪಿ ಕಾರ್ಯಪ್ಪ ಇದ್ದರು.