ಪೊನ್ನಂಪೇಟೆ, ಸೆ. ೧ : ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‌ಚಂದ್ ಅವರ ಜನ್ಮದಿನದ ಅಂಗವಾಗಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ರಾಷ್ಟಿçÃಯ ಕ್ರೀಡಾ ದಿನ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾವೇರಿ ಕಾಲೇಜು ಪ್ರಾಂಶುಪಾಲ ಡಾ.ಎಂ.ಬಿ. ಕಾವೇರಿಯಪ್ಪ ಮೇಜರ್ ಧ್ಯಾನ್‌ಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ನಂತರ ಮಾತನಾಡಿದ ಅವರು, ವಿಶ್ವ ಕಂಡ ಅಪರೂಪದ ಅತ್ಯುತ್ತಮ ಹಾಕಿ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಧ್ಯಾನ್‌ಚಂದ್ ಅಂತಾರಾಷ್ಟಿçÃಯ ಮಟ್ಟದ ಕ್ರೀಡಾ ಭೂಪಟದಲ್ಲಿ ಮೊದಲ ಬಾರಿಗೆ ಭಾರತ ಮಿನುಗುವಂತೆ ಮಾಡಿದ್ದರು ಎಂದರು.
ಈ ಸಂದರ್ಭ ಉಪಪ್ರಾಂಶುಪಾಲೆ ಪ್ರೊ. ಎಂ.ಎಸ್. ಭಾರತಿ, ಐ.ಕ್ಯೂ.ಎ.ಸಿ. ಸಂಚಾಲಕಿ ಡಾ. ನಯನ ತಮ್ಮಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಡಾ.ಪಿ.ಪಿ. ಸವಿತಾ, ದೈಹಿಕ ಶಿಕ್ಷಣ ನಿರ್ದೇಶಕ ಎಂ.ಟಿ. ಸಂತೋಷ್, ಹಾಕಿ ತರಬೇತುದಾರ ಮಿನ್ನಂಡ ಜೋಯಪ್ಪ, ಉಪನ್ಯಾಸಕರು, ಆಡಳಿತಾತ್ಮಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.