ಕರಿಕೆ, ಸೆ. ೧: ಇಲ್ಲಿಗೆ ಸಮೀಪದ ಚೆÀÀತ್ತುಕಾಯ ಪಚ್ಚೆಪಿಲಾವು ಎಂಬಲ್ಲಿ ನೂತನವಾಗಿ ನಿರ್ಮಾಣವಾದ ಮಹರ್ಷಿ ವಾಲ್ಮೀಕಿ ಬುಡಕಟ್ಟು ಆಶ್ರಮ ವಸತಿ ಶಾಲೆಯನ್ನು ವೀರಾಜಪೇಟೆ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣನವರು ಉದ್ಘಾಟನೆ ಮಾಡಿದರು.
ಸುಮಾರು ನಾಲ್ಕು ಕೋಟಿ ವೆಚ್ಚದಲ್ಲಿ ಕಟ್ಟಡವನ್ನು ಉದ್ಘಾಟನೆ ಮಾಡಿ ಬಳಿಕ ಮಾತನಾಡಿದ ಶಾಸಕರು ಗಡಿಭಾಗದಲ್ಲಿ ಉತ್ತಮ ರೀತಿಯಲ್ಲಿ ಕಟ್ಟಡ ನಿರ್ಮಾಣವಾಗಿದ್ದು ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಿವಿಮಾತು ಹೇಳಿದರು.
ಗಿರಿಜನ ಅಭಿವೃದ್ಧಿ ಯೋಜನೆಯ ಜಿಲ್ಲಾ ಸಮನ್ವಯ ಅಧಿಕಾರಿ ಹೊನ್ನೇಗೌಡ ಮಾತನಾಡಿ ಹಿಂದಿನ ಜಿಲ್ಲಾಧಿಕಾರಿ ಸತೀಶ್ ಅವರ ಸಹಕಾರದಿಂದ ೫ ಎಕರೆ ಸರಕಾರಿ ಜಮೀನು ಇಲಾಖೆಗೆ ಮಂಜೂರಾದ ಪರಿಣಾಮ ಅಂದಿನ ಶಾಸಕರಾದ ಕೆ.ಜಿ. ಬೋಪಯ್ಯ ೨ ಕೋಟಿ ಅನುದಾನ ಬಿಡುಗಡೆ ಮಾಡಿಸಿ ಭೂಮಿ ಪೂಜೆ ನೆರವೇರಿಸಿ ಕಾಮಗಾರಿ ಆರಂಭವಾಗಿತ್ತು. ಬಳಿಕ ಸರ್ಕಾರ ಬದಲಾಗಿ ನೂತನ ಶಾಸಕರಾದ ಎ. ಎಸ್. ಪೊನ್ನಣ್ಣ ಅವರು ಉಳಿದ ಅನುದಾನ ಬಿಡುಗಡೆಗೆ ಸರಕಾರದ ಮಟ್ಟದಲ್ಲಿ ವಿಶೇಷ ಪ್ರಯತ್ನ ನಡೆಸಿ ಇಂದು ಕಟ್ಟಡ ಉದ್ಘಾಟನೆ ಮಾಡಿದ್ದಾರೆ ಎಂದು ತಿಳಿಸಿದರು.
ಬೆಳಿಗ್ಗೆ ಗಣಪತಿ ಹವನ ಹಾಗೂ ಶಾರದಾ ಪೂಜೆಯನ್ನು ಅರ್ಚಕರಾದ ಗೌರಿ ಶಂಕರ ಭಟ್ ನೆರವೇರಿಸಿದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್. ಬಾಲಚಂದ್ರ ನಾಯರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್, ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಬಾಲಕೃಷ್ಣ ರೈ, ವಿರೂಪಾಕ್ಷ, ಅಭಿಯಂತರ ರಾಘವೇಂದ್ರ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕುದುಪಜೆ ಕಲ್ಪನಾ ಜಗದೀಶ್, ಸದಸ್ಯ ರಾದ ಕೆ ಎ ನಾರಾಯಣ, ದೀಪಿಕಾ ದಯಾನಂದ, ಪುರುಷೋತ್ತಮ್ಮ, ಜಯಶ್ರೀ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಣಪತಿ ಪಿ.ಪಿ, ಪ್ರಮುಖರಾದ ಬೇಕಲ್ ದೇವರಾಜ್, ದರ್ಶನ್, ಸೋಮಶೇಖರ್, ಮುಖ್ಯ ಶಿಕ್ಷಕ ರಜನಿಕಾಂತ್, ಸೇರಿದಂತೆ ಶಿಕ್ಷಕರು ಪೋಷಕರು, ಗ್ರಾಮಸ್ಥರು
ಹಾಜರಿದ್ದರು. -ಸುಧೀರ್