ಕೂಡಿಗೆ, ಸೆ. ೪: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ನೀಡಲಾಗುವ ವಾರ್ಷಿಕ ಪ್ರಶಸ್ತಿಯಲ್ಲಿ ಕೂಡುಮಂಗಳೂರು ರಾಮೇಶ್ವರ ಸಹಕಾರ ಸಂಘವು ಸೋಮವಾರಪೇಟೆ ತಾಲೂಕು ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿಕೊಂಡಿದೆ.

ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ, ರಾಮೇಶ್ವರ ಕೂಡುಮಂಗಳೂರು ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್ ಅವರಿಗೆ ಪ್ರಶಸ್ತಿ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಕೂಡುಮಂಗಳೂರು ಸಹಕಾರ ಸಂಘದ ನಿರ್ದೇಶಕರಾದ ಎಸ್.ಎಸ್. ಅರುಣ್ ರಾವ್, ಕೆ.ಪಿ. ರಾಜು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕರು ಹಾಜರಿದ್ದರು.