ಸಿದ್ದಾಪುರ, ಸೆ. ೪: ಕೊಡಗು ಜಿಲ್ಲಾ ಎಸ್.ಎನ್.ಡಿ.ಪಿ. ಯೂನಿಯನ್ ವತಿಯಿಂದ ಸಿದ್ದಾಪುರದಲ್ಲಿ ಶ್ರೀ ನಾರಾಯಣ ಗುರುಗಳ ೧೭೧ನೇ ಜಯಂತಿಯನ್ನು ಆಚರಿಸಲಾಗುವುದೆಂದು ಜಿಲ್ಲಾಧ್ಯಕ್ಷ ವಿ.ಕೆ. ಲೋಕೇಶ್. ತಿಳಿಸಿದರು.
ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್.ಎನ್.ಡಿ.ಪಿ. ೫೦ಕ್ಕೂ ಅಧಿಕ ಶಾಖೆಗಳನ್ನು ಹೊಂದಿದ್ದು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ನೆರವು ಹಾಗೂ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯ ಧನ ನೀಡಲಾಗಿದೆ. ಸಹಕಾರ ಸಂಘದ ಸದಸ್ಯರಿಗೆ ಆರ್ಥಿಕ ನೆರವನ್ನು ಸಾಲದ ರೂಪದಲ್ಲಿ ನೀಡಿ ಸ್ವಾವಲಂಬಿಗೊಳಿಸುವ ಪ್ರಯತ್ನವೂ ನಡೆಯುತ್ತಿದೆ. ಸಂಘಟನೆ ವತಿಯಿಂದ ಆ್ಯಂಬುಲೆನ್ಸ್ ಸೇವೆ ಕಲ್ಪಿಸಲಾಗಿದೆ ಎಂದು ವಿವರಿಸಿದರು.
ತಾ.೭ರಂದು ಬೆಳಿಗ್ಗೆ ೯ .೩೦ಕ್ಕೆ ಗಂಟೆಗೆ ಗುರು ಪೂಜೆ ಬಳಿಕ ಧ್ವಜಾರೋಹಣವನ್ನು ಟಿ.ಕೆ. ಸೋಮನ್ ನೆರವೇರಿಸಲಿದ್ದಾರೆ. ಬೆಳಿಗ್ಗೆ ೧೦:೩೦ಕ್ಕೆ ಸಿದ್ದಾಪುರದ ಶ್ರೀ ಅಯ್ಯಪ್ಪ ದೇವಾಲಯದ ಮುಂಭಾಗದಿAದ ಶ್ರೀ ನಾರಾಯಣ ಗುರುಗಳ ಮೂರ್ತಿಯನ್ನು ಅಲಂಕೃತ ಭವ್ಯ ಮಂಟಪದಲ್ಲಿ ಪ್ರತಿಷ್ಠಾಪಿಸಿ ವಾದ್ಯ ಮೇಳದೊಂದಿಗೆ ಸಿದ್ದಾಪುರದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಿದ್ದಾಪುರದ ಶ್ರೀ ನಾರಾಯಣ ಸಭಾಂಗಣಕ್ಕೆ (ಸ್ವರ್ಣಮಾಲಾ) ತೆರಳಲಾಗುವುದು. ಮೆರವಣಿಗೆಯನ್ನು ಎಂ.ವಿ. ಸಜೀವನ್ ಉದ್ಘಾಟಿಸಲಿದ್ದಾರೆ. ಪೂರ್ವಾಹ್ನ ೧೧.೪೫ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾಧ್ಯಕ್ಷ ವಿ.ಕೆ. ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮಕ್ಕೆ ಅರಮೇರಿ ಕಳಂಚೇರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಪಾಲ್ಗೊಂಡು ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಯದುವೀರ್ ಒಡೆಯರ್, ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ. ವಿಧಾನಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ. ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಸಮಾಜ ಸೇವಕ ಹರಪಳ್ಳಿ ರವೀಂದ್ರ. ಹಿಂದು ಮಲಯಾಳಿ ಸಮಾಜದ ಜಿಲ್ಲಾಧ್ಯಕ್ಷ ವಿ.ಎಂ. ವಿಜಯನ್. ಉದ್ಯಮಿ ಇಮ್ಯಾನುಲ್ ಟಿ. ರಾಮಪುರಂ. ಬಿಲ್ಲವ ಸಮಾಜದ ಜಿಲ್ಲಾಧ್ಯಕ್ಷ ಬಿ.ಆರ್. ಲಿಂಗಪ್ಪ. ಸಿದ್ದಾಪುರ ಕೊಡವ ಕಲ್ಚರ್ ಅಸೋಸಿಯೇಷನ್ ಅಧ್ಯಕ್ಷ ಕುಕ್ಕೇರ ಉತ್ತಪ್ಪ. ಲಿಟಲ್ ಸ್ಕಾಲರ್ ಅಕಾಡೆಮಿಯ ಪೂಜಾ ಸಜೇಶ್ ಮತ್ತು ಟಿ.ಎಲ್. ಪ್ರವೀಣ್ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳನ್ನು ಸನ್ಮಾನಿಸಲಾಗುವುದು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು ಸಂಜೆ ಕೇರಳದ ರಂಜು ಚಾಲಕುಡಿ ೭ ಬಿಟ್ಸ್ ಆರ್ಕೆಸ್ಟç ತಂಡದಿAದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಎಂದರು.
ಗೋಷ್ಠಿಯಲ್ಲಿ ಕಾರ್ಯದರ್ಶಿ ಕೆ.ವಿ. ಪ್ರೇಮಾನಂದ, ಆಚರಣಾ ಸಮಿತಿ ಅಧ್ಯಕ್ಷ ಎಂ.ಜಿ. ರಾಜು, ಕಾರ್ಯದರ್ಶಿ ರೆÀಜಿತ್ ಕುಮಾರ್, ಜಿಲ್ಲಾ ವನಿತಾ ಯೂನಿಯನ್ ಅಧ್ಯಕ್ಷೆ ರಿಶ ಸುರೇಂದ್ರ, ಸದಸ್ಯರಾದ ಟಿ.ಆರ್. ಪಾಪಯ್ಯ, ಗಿರೀಶ್ ಮಟ್ಟಂ, ಎಂಎ. ಆನಂದ ಹಾಜರಿದ್ದರು.