ಮಡಿಕೇರಿ, ಸೆ. ೫: ಮಡಿಕೇರಿಯ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ವತಿಯಿಂದ ನಗರದ ಬ್ರಾಹ್ಮಣರ ಬೀದಿಯ ಶತಮಾನ ಭವನದ ಲಕ್ಷಿö್ಮÃನರಸಿಂಹ ಕಲ್ಯಾಣ ಮಂಟಪದಲ್ಲಿ ಋಗುಪಾಕರ್ಮ ಕಾರ್ಯಕ್ರಮ ನೆರವೇರಿತು. ಪುರೋಹಿತರಾದ ರಾಧಾಕೃಷ್ಣ ಭಟ್ ಅವರ ನೇತೃತ್ವದಲ್ಲಿ ಬೆಳಿಗ್ಗೆ ೭:೩೦ ಕ್ಕೆ ಉಪಾಕರ್ಮ ಕಾರ್ಯಕ್ರಮ ಪ್ರಾರಂಭವಾಯಿತು. ಬಳಿಕ ಉಪಹಾರ ವ್ಯವಸ್ಥೆ ಕಲ್ಪಿಸಲಾಗಿತ್ತು. ನಿಧಿಯ ಆಡಳಿತ ಮಂಡಳಿ ಸದಸ್ಯರು ಹಾಗೂ ಸಮಾಜದ ಬಾಂಧವರು ಈ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.