ಪೊನ್ನಂಪೇಟೆ, ಸೆ. ೫: ಹೃದ ಯಾಘಾತದಿಂದ ಕಾರಿನಲ್ಲಿಯೇ ಪೊನ್ನಂಪೇಟೆ ತಾಲೂಕು ಪಂಚಾಯಿತಿಯಲ್ಲಿ ಪ್ರಬಾರ ಯೋಜನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮನಮೋಹನ್ (೪೧) ಸಾವನ್ನಪ್ಪಿದ್ದಾರೆ. ತಿತಿಮತಿಯಿಂದ ಪಿರಿಯಾಪಟ್ಟಣಕ್ಕೆ ತನ್ನ ಆಲ್ಟೋ ಕಾರಿನಲ್ಲಿ ತಾ. ೫ ರಂದು ಸಂಜೆ ೪ ಗಂಟೆ ಸಮಯದಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದ ಸಂದರ್ಭ ಬೂದಿತಿಟ್ಟು ಬಳಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೂಲತಃ ಚಿಕ್ಕಬಳ್ಳಾಪುರದವರಾಗಿರುವ ಮನಮೋಹನ್ ಅವರು ತಿತಿಮತಿಯಲ್ಲಿ ನೆಲೆಸಿದ್ದರು.

ಇವರು ಪೊನ್ನಪ್ಪಸಂತೆ, ನಿಟ್ಟೂರು, ಬಾಳೆಲೆ, ಸೋಮವಾರಪೇಟೆ, ಸಿದ್ದಾಪುರದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದರು. ಕಳೆದ ಒಂದೂವರೆ ತಿಂಗಳಿನಿAದ ಪೊನ್ನಂಪೇಟೆ ತಾಲೂಕು ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದು, ಪೊನ್ನಂಪೇಟೆ ತಾಲೂಕು ಪಂಚಾಯಿತಿಯ ಕಾರ್ಯನಿರ್ವಣಾಧಿಕಾರಿಗಳು ಹಾಗೂ ಸಿಬ್ಬಂದಿ ಸಂತಾಪ ವ್ಯಕ್ತಪಡಿಸಿದ್ದಾರೆ.