ಹಾಸನ, ಸೆ. ೧೨: ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ ತೆರಳುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಜನರ ಗುಂಪಿನ ಮೇಲೆ ನುಗ್ಗಿದ ಪರಿಣಾಮ ಘಟನೆ ಸಂಭವಿಸಿದೆ.
ಹಾಸನದ ಮೊಸಳೆಹೊಸಳ್ಳಿ ಬಳಿ ಅಪಘಾತ ಸಂಭವಿಸಿದ್ದು, ೨೦ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ. ರಾಷ್ಟಿçÃಯ ಹೆದ್ದಾರಿ ೩೭೩ರ ಚತುಷ್ಪಥ ರಸ್ತೆಯ ಒಂದು ಬದಿಯಲ್ಲಿ ಗಣೇಶ ಮೂರ್ತಿ ಮೆರವಣಿಗೆಗೆ ಅವಕಾಶ ನೀಡಲಾಗಿತ್ತು. ಈ ವೇಳೆ ವೇಗವಾಗಿ ಬಂದ ಮಹಾರಾಷ್ಟç ಮೂಲದ ಕ್ಯಾಂಟರ್ ಮೊದಲಿಗೆ ಬೈಕ್ಗೆ ಡಿಕ್ಕಿ ಹೊಡೆದು ನಂತರ ಮೆರವಣಿಗೆಯಲ್ಲಿ ಸಾಗುತ್ತಿದ್ದ ನೂರಾರು ಜನರ ಮೇಲೆ ನುಗ್ಗಿದೆ. ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೂವರು ಸಾವನ್ನಪ್ಪಿದರು. ಟ್ರಕ್ ಚಾಲಕ ಭುವನೇಶ್ ಎಂದು ಗುರುತಿಸಲಾಗಿದೆ. ಅಪಘಾತದ ನಂತರ ಸ್ಥಳೀಯರು ಚಾಲಕನಿಗೂ ಹಿಗ್ಗಾಮುಗ್ಗ ಥಳಿಸಿದ್ದು ಭುವನೇಶ್ ಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಈ ಬಗ್ಗೆ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ. ೫ ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.