ಮಡಿಕೇರಿ, ಸೆ. ೧೨: ಮಡಿಕೇರಿ ಹಾಗೂ ಗೋಣಿಕೊಪ್ಪ ದಸರಾ ಆಚರಣೆ ಸಂಬAಧ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಅಧ್ಯಕ್ಷತೆಯಲ್ಲಿ ತಾ. ೧೫ ರಂದು ಸಭೆ ನಡೆಯಲಿದೆ.
ಅಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿ ಹಾಗೂ ದಸರಾ ಸಮಿತಿ ಪ್ರಮುಖರೊಂದಿಗೆ ನಡೆಯಲಿರುವ ಸಭೆಯಲ್ಲಿ ಆಚರಣೆ ಸಂಬAಧ ಚರ್ಚೆಗಳು ನಡೆಯಲಿವೆ. ಇದರೊಂದಿಗೆ ಬೆಳಿಗ್ಗೆ ಜಿಲ್ಲಾಡಳಿತ ವತಿಯಿಂದ ಆಯೋಜಿಸಿರುವ ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಳೆಹಾನಿ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ, ಮಧ್ಯಾಹ್ನ ೩.೩೦ಕ್ಕೆ ಕಾವೇರಿ ತೀರ್ಥೋದ್ಭವ ಸಂಬAಧ ಪೂರ್ವಾಭಾವಿ ಸಭೆ ಭಾಗಮಂಡಲದ ಭಗಂಡೇಶ್ವರ ದೇವಾಲಯದ ಹಳೆಮುಡಿ ಕಟ್ಟಡದಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.