ಮಡಿಕೇರಿ, ಸೆ. ೧೩: ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ತಾ. ೧೭ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಬೆ.೯ಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ನಗರದ ಐಬಿಯಲ್ಲಿ ಚರ್ಚಿಸಲಿದ್ದಾರೆ. ಬಳಿಕ ೧೦ಕ್ಕೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ ೧೧ಕ್ಕೆ ನಗರದ ಕ್ರಿಸ್ಟಲ್ ಹಾಲ್‌ನಲ್ಲಿ ಕೊಡಗು ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ‘ಸ್ಮಾರ್ಟ್ ಕಾರ್ಡ್’ ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮ.೩ಕ್ಕೆ ಕೊಡಗು ಜಿಲ್ಲೆಯ ವಿವಿಧ ಸಂಸ್ಥೆಗಳ ಪ್ರಮುಖರೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚರ್ಚಿಸಲಿದ್ದಾರೆ.