ಮಡಿಕೇರಿ, ಸೆ. ೧೩: ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಕೆನರಾ ಬ್ಯಾಂಕ್ ,ಕರ್ನಾಟಕ ಗ್ರಾಮೀಣ ಬ್ಯಾಂಕ್ ಶನಿವಾರಸಂತೆ ಇವರ ಸಹಯೋಗದೊಂದಿಗೆ ಸೋಮವಾರಪೇಟೆ ತಾಲೂಕಿನ ಹಂಡ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಕೇಂದ್ರ ಸರ್ಕಾರದ ಆದೇಶದಂತೆ ಆಯಾ ಗ್ರಾಮದ ಬ್ಯಾಂಕ್ ಶಾಖೆ ಮುಖಾಂತರ ಪ್ರತಿ ವರ್ಷವೂ ನಡೆಸುವ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮವನ್ನು ಹಂಡ್ಲಿ ಪಂಚಾಯತ್‌ನಲ್ಲಿ ಹಮ್ಮಿಕೊಳ್ಳಲಾಯಿತು.

ಆರ್ಥಿಕ ಸಮಾಲೋಚಕರಾದ ಶ್ಯಾಮಲ ಎ.ಎಸ್., ಬ್ಯಾಂಕ್ ವ್ಯವಸ್ಥಾಪಕ ಅಭಿಮನ್ಯು ಕುಮಾರ್ ರವರು ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆಯುವಂತೆ ಸಲಹೆ ನೀಡಿದರು.

ಕೆನರಾ ಬ್ಯಾಂಕ್‌ನ ಕೀರ್ತಿರಾಜ್ ಅವರು ಸ್ವ ಉದ್ಯೋಗ ನಡೆಸಲು, ಸಂಜೀವಿನಿ ಸಂಘದ ಸದಸ್ಯರುಗಳಿಗೆ ನೀಡುವ ಸಾಲ ಸೌಲಭ್ಯದ ಕುರಿತು ರಿ ಕೆವೈಸಿ ಮಾಡಿಸುವಂತೆ ಮಾಹಿತಿ ನೀಡಿದರು. ಕೆನರಾ ಬ್ಯಾಂಕ್ ಮಡಿಕೇರಿ ಡಿ.ಎಂ. ಜಯಶ್ರೀ ಪಂಚಾಯತ್ ಅಧ್ಯಕ್ಷರಾದ ಸುಧಾ ಹಿರೇಶ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಯೆಷಾ ಮಾತನಾಡಿದರು. ಕೆನರಾ ಬ್ಯಾಂಕ್ ವ್ಯವಸ್ಥಾಪಕರು ಮಹಾರಾಜನ್ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕೆನರಾ ಬ್ಯಾಂಕಿನ ಸಿದ್ದಲಿಂಗಪ್ಪ ನಿರೂಪಿಸಿದರು.