ವೀರಾಜಪೇಟೆ, ಸೆ. ೧೩: ದಂತ ವೈದ್ಯಕೀಯ ಕ್ಷೇತ್ರ ಹೊಸ ಆವಿಷ್ಕಾರಗಳನ್ನು ಹುಟ್ಟುಹಾಕುತ್ತಿದೆ. ಈ ನಿಟ್ಟಿನಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ತಂತ್ರಜ್ಞಾನದೊAದಿಗೆ ಪ್ರಯೋಗಗಳನ್ನು ಮಾಡುವುದರತ್ತ ಗಮನ ಹರಿಸಬೇಕು ಎಂದು ಮೈಸೂರು ಕೊಡಗು ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಹೇಳಿದರು.

ವೀರಾಜಪೇಟೆಯ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ಕಾಲೇಜು ಸಭಾಂಗಣದಲ್ಲಿ ನಡೆದ ೨೦೨೫ನೇ ಸಾಲಿನ ಪದವಿ ಪ್ರದಾನ ಸಮಾರಂಭದಲ್ಲಿ ದೀಪ ಬೆಳಗಿಸಿ ವೈದ್ಯಕೀಯ ಅಧ್ಯಯನ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಬಳಿಕ ಮಾತನಾಡಿದ ಅವರು, ಪದವಿ ಮುಗಿಸಿದ ವಿದ್ಯಾರ್ಥಿಗಳು ಇನ್ನು ಮುಂದೆ ವೈದ್ಯರಾಗಿ ಕಾರ್ಯನಿರ್ವಹಿಸಲಿದ್ದು, ಆತ್ಮವಿಶ್ವಾಸ ಮತ್ತು ಆತ್ಮಸ್ಥೆöÊರ್ಯದ ಮೂಲಕ ಉದ್ಯೋಗ ಮಾಡಬೇಕಿದೆ. ಗ್ರಾಮೀಣ ಭಾಗದಲ್ಲಿ ಹೆಚ್ಚು ಒತ್ತು ನೀಡಿ ಬಡ ಜನತೆಗೆ ಅನುಕೂಲ ಆಗುವ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು.

ವೈದ್ಯರಾದ ಬಳಿಕ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡು ತಮ್ಮ ಪ್ರತಿಭೆಯನ್ನು ದಂತ ವೈದ್ಯಕೀಯ ಕ್ಷೇತ್ರಕ್ಕೆ ಕೊಡುಗೆಯಾಗಿ ನೀಡಬೇಕು ಎಂದು ಯದುವೀರ್ ಹೇಳಿದರು.

ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯ ಡೀನ್ ಡಾ.ಸುನೀಲ್ ಮುದ್ದಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸ್ಥೆಯ ೨೫ ವರ್ಷಗಳ ಪ್ರಯಾಣವನ್ನು ವಿವರಿಸಿದರು.

ಕಳೆದ ೨೫ ವರ್ಷಗಳಲ್ಲಿ ಕೊಡಗಿನ ದೂರದ ಮೂಲೆಗಳಲ್ಲಿ ಮೌಕಿಕ ಆರೋಗ್ಯ ವಿತರಣೆಯನ್ನು ಸಕ್ರಿಯಗೊಳಿಸಿದ್ದು ೨೦೨೫ ರಲ್ಲಿ ೩೦,೦೦೦ಕ್ಕೂ ಹೆಚ್ಚು ಜನರಿಗೆ ಪ್ರಯೋಜನವಾಗಿದೆ. ಇದರಲ್ಲಿ ಮುಖದ ಪುನರ್ವಸತಿ ಕಾರ್ಯವಿಧಾನಗಳು, ೩೦೦೦ ಕ್ಯಾನ್ಸರ್ ಸ್ಕಿçÃನಿಂಗ್‌ಗಳು ಮತ್ತು ವಿಶೇಷ ಅಗತ್ಯವಿರುವ ೮೦೦ಕ್ಕೂ ಹೆಚ್ಚು ಮಕ್ಕಳಿಗೆ ಚಿಕಿತ್ಸೆ ಮಾಡಲಾಗಿದೆ. ತರಬೇತಿ ಮತ್ತು ರೋಗಿಗಳ ಆರೈಕೆಯಲ್ಲಿ ಕೃತಕ ಬುದ್ಧಿಮತ್ತೆ, ವರ್ದಿತ ರಿಯಾಲಿಟಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದಾಗಿ ಘೋಷಿಸಿದರು.

ಇದೇ ಸಂದರ್ಭ ಸಂಸದ ಯದುವೀರ್ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯ ಪ್ರಾಂಶುಪಾಲ ಡಾ. ಕೆ.ಸಿ. ಪೊನ್ನಪ್ಪ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಉಪಪ್ರಾಂಶುಪಾಲ ಡಾ. ಜಿತೇಶ್ ಜೈನ್ ಮತ್ತು ವಿವಿಧ ವಿಭಾಗಗಳ ಉಪನ್ಯಾಸಕರು ವೇದಿಕೆಯಲ್ಲಿದ್ದರು.

೩೦ ಮಂದಿಗೆ ಸ್ನಾತಕೋತ್ತರ ಪದವಿ ಪ್ರದಾನ ಮತ್ತು ೪೦ ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಎಲ್ಲಾ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಡಾ. ಗಾಯತ್ರಿ ಎಸ್. ಚಂದ್ರನ್ ಅವರಿಗೆ ಕಂಜಿತAಡ ಎಂ. ಕುಶಾಲಪ್ಪ ಚಿನ್ನದ ಪದಕ ನೀಡಿ ಗೌರವಿಸಲಾಯಿತು. ಕೆ. ಪೊನ್ನಮ್ಮ ಕುಶಾಲಪ್ಪ ಚಿನ್ನದ ಪದಕವನ್ನು ಶೈಕ್ಷಣಿಕ ಸಾಧನೆಗಾಗಿ ಡಾ. ರಜಿನಿ ಪಡೆದುಕೊಂಡರು.

ಪದವಿ ಪ್ರತಿನಿಧಿ ಡಾ. ಅಲ್ಫಿನಾ ಹಾಗೂ ಸ್ನಾತಕೋತ್ತರ ಪ್ರತಿನಿಧಿ ಡಾ. ಸಮಂತಾ ಗಣಪತಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಪೋಷಕರನ್ನು ಪ್ರತಿನಿಧಿಸಿದ ಡಾ. ದೊಡ್ಡಯ್ಯ ಮಾತ ನಾಡಿದರು.

ದಂತ ವೈದ್ಯ ಕೀಯ ಮಹಾ ವಿದ್ಯಾಲಯದ ಉಪನ್ಯಾಸಕರು, ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಪದವಿ ಪಡೆದ ವಿದ್ಯಾರ್ಥಿಗಳು ಸೇರಿದಂತೆ ವಿದ್ಯಾರ್ಥಿಗಳ ಪೋಷ ಕರು ಹಾಜರಿದ್ದರು. ವಿದ್ಯಾರ್ಥಿಗಳಿಂದ ಸಂಸ್ಕöÈತಿಯನ್ನು ಬಿಂಬಿಸುವ ಕಲಾ ಪ್ರಕಾರಗಳ ಪ್ರದರ್ಶನ ನಡೆಯಿತು.