ಗೋಣಿಕೊಪ್ಪಲು, ಸೆ. ೧೩: ನಿಟ್ಟೂರು ಗ್ರಾಮ ಪಂಚಾಯಿತಿಯ ೨೦೨೫-೨೬ ಸಾಲಿನ ನಿಟ್ಟೂರು ೨ ವಾರ್ಡ್ನ ಸಭೆ ತಾ. ೧೫ರ ಬೆಳಿಗ್ಗೆ ೧೦ ಗಂಟೆಗೆ ನಿಟ್ಟೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕಾಟಿಮಾಡ ಶರೀನ್ ಮುತ್ತಣ್ಣ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ. ನಿಟ್ಟೂರು ೧ನೇ ವಾರ್ಡಿನ ಸಭೆ ತಾ. ೧೫ರ ಮಧ್ಯಾಹ್ನ ೧೨ ಗಂಟೆಗೆ ತಟ್ಟಕೆರೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಂಚಾಯಿತಿ ಸದಸ್ಯರಾದ ಚೆಕ್ಕೆರ ಎಂ. ಅಯ್ಯಪ್ಪ ಅಧ್ಯಕ್ಷತೆಯಲ್ಲಿ ಜರುಗಲಿದೆ.
ಕೊಟ್ಟಗೇರಿ ವಾರ್ಡ್ ಸಭೆಯು ತಾ. ೧೫ರ ಅಪರಾಹ್ನ ೪ ಗಂಟೆಗೆ ಕೊಟ್ಟಗೇರಿ ಸಮುದಾಯ ಭವನದಲ್ಲಿ ಪಂಚಾಯಿತಿ ಸದಸ್ಯರಾದ ಅಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ. ಅಕ್ಟೋಬರ್ ೧೩ರ ಬೆಳಿಗ್ಗೆ ೧೧ ಗಂಟೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಿ.ಆರ್. ಅಮ್ಮುಣಿ ಅವರ ಅಧ್ಯಕ್ಷತೆಯಲ್ಲಿ ನಿಟ್ಟೂರು ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಗ್ರಾಮ ಸಭೆ ಆಯೋಜಿಸಲಾಗಿದೆ ಎಂದು ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.