ನಾಪೋಕ್ಲು, ಸೆ. ೧೩: ನಾಪೋಕ್ಲು ಕೊಡವ ಸಮಾಜದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಆಟಿಡೊಂಜಿ ದಿನ-೨೦೨೫ ಕಾರ್ಯಕ್ರಮದಲ್ಲಿ ವಾಗ್ಮಿ ಬಂಟ್ವಾಳದ ಶ್ರೀನಿಧಿ, ನಾಟಿ ವೈದ್ಯ ಬಿ.ಎಂ. ಬಾಬು ಪೂಜಾರಿ, ಛಾಯಾಗ್ರಹಕ ಬಿ. ಆರ್. ವಸಂತ ಇವರುಗಳನ್ನು ಬಿಲ್ಲವ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ನಾಪೋಕ್ಲು ಬಿಲ್ಲವ ಸಂಘದ ಅಧ್ಯಕ್ಷ ಬಿ.ಎಂ. ಪ್ರತೀಪ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಮಾಜದ ಗಣ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.