ಮಡಿಕೇರಿ, ಸೆ. ೧೩: ಮಡಿಕೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಮಡಿಕೇರಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಬೆಟ್ಟಗೇರಿ ಉದಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಸಾಧನೆ ಮಾಡಿದ್ದಾರೆ.
ಆಶೀರ್, ತಟ್ಟೆ ಎಸೆತದಲ್ಲಿ ದ್ವಿತೀಯ ಸ್ಥಾನ, ಭಾರದ ಗುಂಡು ಎಸೆತದಲ್ಲಿ ಫಯಾಜ್ ದ್ವಿತೀಯ ಸ್ಥಾನ, ೧೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ಸಜನ್.ಎನ್.ಯು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಶಾಲಾ ತಂಡ ಬಾಲಕರ ಥ್ರೋ ಬಾಲ್‌ನಲ್ಲಿ ಪ್ರಥಮ ಸ್ಥಾನ, ಬಾಲಕರ ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ, ಬಾಲಕರ ಖೋಖೋದಲ್ಲಿ ಪ್ರಥಮ ಸ್ಥಾನ, ಬಾಲಕಿಯರ ಥ್ರೋ ಬಾಲ್‌ನಲ್ಲಿ ದ್ವಿತೀಯ ಸ್ಥಾನ, ಬಾಲಕಿಯರ ಖೊ ಖೋ ದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತರಬೇತುದಾರರಾಗಿ ದೈಹಿಕ ಶಿಕ್ಷಣ ಶಿಕ್ಷಕಿ ರೀನಾ ಮುತ್ತಮ್ಮ ಹಾಗೂ ಮುಖ್ಯೋಪಾಧ್ಯಾಯರಾದ ಹೇಮಂತ್. ಪಿ.ಪಿ. ಅವರು ತರಬೇತಿ ನೀಡಿದ್ದರು.