ಮಡಿಕೇರಿ, ಸೆ. ೧೩: ಪೊನ್ನಂಪೇಟೆ ಸಿಐಟಿ ಕಾಲೇಜಿನ ಎಐಎಮ್ ಎಲ್ ವಿಭಾಗದ ಅವಿನ್ಯಂ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಪರಮ ವೀರ ಚಕ್ರ ಪುರಸ್ಕöÈತ ದಿ. ಕ್ಯಾಪ್ಟನ್ ವಿಕ್ರಮ್ ಭಾತ್ರಾ ಅವರ ಹುಟ್ಟುಹಬ್ಬದ ಅಂಗವಾಗಿ ಶೌರ್ಯ ದಿವಸವನ್ನು ಆಚರಿಸಲಾಯಿತು.

ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕೊಡಗು ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ಯುದ್ಧ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ, ಮಾತನಾಡಿ ರಕ್ಷಣಾ ವಲಯದಲ್ಲಿ ತಂತ್ರಜ್ಞಾನವು ವಹಿಸುತ್ತಿರುವ ಪಾತ್ರ, ಶಿಸ್ತು ಮತ್ತು ನಾಯಕತ್ವದ ಅಗತ್ಯತೆ ಬಗ್ಗೆ ವಿವರಿಸಿದರು. ಅಲ್ಲದೆ ಎಂಜಿನಿಯರಿAಗ್ ಬಳಿಕ ಸೇನೆ ಸೇರುವ ಅವಕಾಶಗಳು ಹಾಗೂ ಸೇನೆ ಸೇರುವುದರಿಂದ ದೊರೆಯುವ ಪ್ರಯೋಜನಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾಲೇಜಿನ ಪ್ರಬಾರ ಪ್ರಾಂಶುಪಾಲ ಪ್ರೊ. ಎ.ಜಿ. ತಿಮ್ಮಯ್ಯ (ಮೆಕ್ಯಾನಿಕಲ್ ವಿಭಾಗ) ಮಾತನಾಡಿ, ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ್ದಾಗಿವೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಡಾ. ಎಂ.ಸಿ. ಕಾರ್ಯಪ್ಪ, ವಿದ್ಯಾರ್ಥಿಗಳು ಸೇನೆಗೆ ಸೇರುವುದರ ಮೂಲಕ ದೇಶಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಮತ್ತು ರಕ್ಷಣಾ ವಲಯದಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು ಅವಶ್ಯಕ ಎಂದು ಹೇಳಿದರು.

ಈ ಸಂದರ್ಭ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಎಐಎಮ್‌ಎಲ್ ವಿಭಾಗದ ಮುಖ್ಯಸ್ಥ ಡಾ. ಬಿ.ಬಿ. ರಾಮಕೃಷ್ಣ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ನೀಲಂ ತಿಮ್ಮಯ್ಯ ಮತ್ತು ವೆನ್ನೆಲಾ ಕಾರ್ಯಕ್ರಮ ನಿರ್ವಹಿಸಿದರು. ೫ನೇ ಸೆಮಿಸ್ಟರ್ ವಿದ್ಯಾರ್ಥಿ ದೀಕ್ಷಿತ್ ವಂದಿಸಿದರು. ವಿದ್ಯಾರ್ಥಿಗಳಿಂದ ನಡೆದ ದೇಶಭಕ್ತಿ ಗೀತೆ ಹಾಗೂ ನೃತ್ಯ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ರಾಷ್ಟçಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.