ಮಡಿಕೇರಿ, ಸೆ. ೧೩: ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾಮಟ್ಟದಲ್ಲಿ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನು ನೇಮಕ ಮಾಡಲಾಗಿದೆ.

ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರುಗಳನ್ನಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷÀರೂ ಆಗಿರುವ ಬಿ.ಎಸ್. ಲೋಕೇಶ್ ಸಾಗರ್, ಸಾಮಾಜಿಕ ಸೇವಾಕರ್ತೆ ಪಾಲಿಬೆಟ್ಟದ ಡಾ. ಹೆಚ್.ಎಂ. ಕಾವೇರಿ, ಮಡಿಕೇರಿ ನಗರಸಭಾ ಸದಸ್ಯ ಅಮೀನ್ ಮೊಹಿಸಿನ್, ಅರಮೇರಿಯ ಡಾ. ರಾಧಾ ಕುಟ್ಟಪ್ಪ ಹಾಗೂ ವೀರಾಜಪೇಟೆಯ ವಕೀಲ ಕೆ.ವಿ. ಸುನಿಲ್ ಕುಮಾರ್ ಅವರುಗಳನ್ನು ನಾಮನಿರ್ದೇಶನ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶ ಬರುವವರೆಗೆ ಜಾರಿಯಲ್ಲಿರುತ್ತದೆ ಎಂದು ತಿಳಿಸಲಾಗಿದೆ.