ಪೊನ್ನಂಪೇಟೆ, ಸೆ. ೧೩: ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಗೂ ಮಂಡ್ಯ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಇವರ ಸಹಯೋಗದಲ್ಲಿ ಹುದಿಕೇರಿ ಗ್ರಾಮದಲ್ಲಿ ಅಣಬೆ ಕೃಷಿ ಕುರಿತು ಜಾಗೃತಿ ಮತ್ತು ತರಬೇತಿ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಡಾ. ಸುಮನಾ ಸಂಪನ್ಮೂಲ ವ್ಯಕ್ತಿ ಭಾಗವಹಿಸಿ ರೈತರಿಗೆ ಅಣಬೆ ಕೃಷಿಯ ಹಂತಗಳು, ಬೆಳೆಯ ತಾಂತ್ರಿಕ ವಿಧಾನಗಳು ಹಾಗೂ ಅದರ ಆರೋಗ್ಯದ ಮಹತ್ವಗಳ ಕುರಿತು ಮಾಹಿತಿ ನೀಡಿದರು. ಜೊತೆಗೆ ಅವರು ಅಣಬೆ ಚೀಲ ತಯಾರಿಕೆಯ ಪ್ರಾಯೋಗಿಕ ಪ್ರದರ್ಶನವನ್ನು ನೀಡಿದರು. ಸುಮಾರು ೪೦ ಮಂದಿ ರೈತರು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದು ತಮ್ಮ ಅಭಿಪ್ರಾಯ ಹಂಚಿಕೊAಡು, ಅಣಬೆ ಕೃಷಿ ಪರ್ಯಾಯ ಆದಾಯದ ಉತ್ತಮ ಮಾರ್ಗವಾಗಿದ್ದು, ಕಡಿಮೆ ಬಂಡವಾಳದಲ್ಲಿ ಹೆಚ್ಚಿನ ಲಾಭ ನೀಡುವ ಶಕ್ತಿ ಹೊಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಹುದಿಕೇರಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಪುಟ್ಟರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೃಷಿ ಸಖಿ ನೇತ್ರಾವತಿ ಡಾ. ನಿಂಗರಾಜ್, ಡಾ. ಲಕ್ಷಿö್ಮ ಡಾ. ನವೀನ್, ಅರಣ್ಯ ಮಹಾವಿದ್ಯಾಲಯ ಪ್ರಾಧ್ಯಾಪಕರು ಉಪಸ್ಥಿತರಿದ್ದರು.