ಪೊನ್ನಂಪೇಟೆ, ಸೆ. ೧೩: ಪೊನ್ನಂಪೇಟೆಯ ಕೊಡವ ಎಜುಕೇಷನ್ ಸೊಸೈಟಿಯ ಹಳ್ಳಿಗಟ್ಟು ಸಿ.ಐ.ಪಿ.ಯು. ಕಾಲೇಜಿನಲ್ಲಿ ಬೆಂಗಳೂರಿನ ಸ್ಯಾಂಟಮೋನಿಕಾ ಸ್ಟಡಿ ಅಬ್ರಾಡ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಅವರ ಮುಂದಿನ ಭವಿಷ್ಯಕ್ಕೆ ಪೂರಕವಾದ ಉದ್ಯೋಗಾವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ವೃತ್ತಿಮಾರ್ಗದರ್ಶನ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಸ್ಯಾಂಟಿಮೋನಿಕಾ ಸ್ಟಡಿ ಅಬ್ರಾಡ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಶಾಖಾ ವ್ಯವಸ್ಥಾಪಕಿಯಾದ ಶೆರಿನ್ ಚಾಕೊ ಮತ್ತು ಸ್ಟೂಡೆಂಟ್ ರಿಲೇಷನ್ ಮ್ಯಾನೇಜರ್ ಬಿಮೆಲ್ಡಾ ರಾಣಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯಕ್ಕೆ ಪೂರಕವಾದ ಉದ್ಯೋಗ ಕ್ಷೇತ್ರ ಮತ್ತು ಶಿಕ್ಷಣದ ಬಗ್ಗೆ, ವಿದೇಶದಲ್ಲಿ ಲಭ್ಯವಿರುವ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳು ಪಡೆಯಬೇಕಾದ ತರಬೇತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಸಿ.ಐ.ಪಿ.ಯು.ಕಾಲೇಜಿನ ಪ್ರಾಂಶುಪಾಲೆ ಡಾ.ರೋಹಿಣಿ ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಾಗಾರದಲ್ಲಿ ಕಾರ್ಯಕ್ರಮ ಸಂಯೋಜಕಿ ಅನುರಾಧ ಪಿ.ಜೆ ಇನ್ನಿತರರು ಇದ್ದರು.