ಕೂಡಿಗೆ, ಸೆ. ೧೪: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ಕ್ರೀಡಾಕೂಟವು ಕೂಡಿಗೆ ಸರಕಾರಿ ಕ್ರೀಡಾ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ತಾ. ೧೫ ರಂದು (ಇಂದು) ನಡೆಯಲಿದೆ.
ಕ್ರೀಡಾಕೂಟದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಭೋಸರಾಜ್ ನೆರವೇರಿಸುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ವಹಿಸುವರು.
ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೂನ್ನಣ್ಣ, ಲೋಕಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ಸೇರಿದಂತೆ ಅನೇಕ ಗಣ್ಯರು ಭಾಗವಹಿಸುವರು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.್ರÃಡಾಕೂಟ