ಮಡಿಕೇರಿ, ಸೆ. ೧೪: ಪ್ರಸಕ್ತ ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೨ಬಿ, ೩ಎ ಹಾಗೂ ೩ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ ೪ ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ: hಣಣಠಿs://.shಠಿ.ಞಚಿಡಿಟಿಚಿಣಚಿಞಚಿ.gov.iಟಿ/bಛಿತಿಜ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧, ಎಸ್.ಸಿ ಮತ್ತು ಎಸ್.ಟಿ ರೂ.೨.೫೦ ಲಕ್ಷ, ಪ್ರವರ್ಗ-೨ಎ, ೨ಬಿ, ೩ಎ, ೩ಬಿ, ಇತರೆ ಹಿಂದುಳಿದ ವರ್ಗ ರೂ.೧ ಲಕ್ಷ ಆಗಿದೆ. ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ hಣಣಠಿs://.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ/ಅನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bಛಿತಿಜheಟಠಿಟiಟಿe@gmಚಿiಟ.ಛಿom ಈ ಇ-ಮೇಲ್ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಹೆಚ್ಚಿನ ಮಾಹಿತಿಗೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮಡಿಕೇರಿ ತಾಲೂಕು, ಮೊ. ೯೬೩೨೨೨೫೮೪೭, ವೀರಾಜಪೇಟೆ ತಾಲೂಕು ಮೊ. ೯೪೪೮೨೦೫೯೧೯ ಮತ್ತು ಸೋಮವಾರಪೇಟೆ ತಾಲೂಕು ಮೊ. ೮೭೬೨೪೭೬೭೯೦ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.