ಮಡಿಕೇರಿ, ಸೆ. ೧೪: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ವತಿಯಿಂದ ಜಿಲ್ಲೆಯ ಮೂವರು ಲೀಡರ್ ಟ್ರೈನರ್‌ಗಳಿಗೆ ರಾಜ್ಯ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕುಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಅಲಿಮ ಪಿ.ಎಚ್ (ಎಲ್.ಟಿ.ಜಿ), ಅರಮೇರಿ ಎಸ್.ಎಂ.ಎಸ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಮೈಥಿಲಿರಾವ್ (ಎಲ್.ಟಿ.ಜಿ) ಮತ್ತು ಕೊಡಗು ಜಿಲ್ಲಾ ಸಂಸ್ಥೆಯ ಸ್ಕೌಟ್ ಆಯುಕ್ತರಾಗಿರುವ ಜಿಮ್ಮಿ ಸಿಕ್ವೇರ (ಎಲ್.ಟಿ.ಜಿ)ಅವರುಗಳಿಗೆ ಸಂಸ್ಥೆಯಲ್ಲಿನ ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಪ್ರಶಸ್ತಿ ಘೋಷಣೆಯಾಗಿದೆ.

ತಾ.೨೬ರಂದು ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.