ನಾಪೋಕ್ಲು, ಸೆ. ೧೪: ಇಲ್ಲಿಗೆ ಸಮೀಪದ ಕುಂಜಿಲ - ಕಕ್ಕಬ್ಬೆ ಸಂಜೀವಿನಿ ಒಕ್ಕೂಟ ಹಾಗೂ ಪಂಚಾಯಿತಿ ವತಿಯಿಂದ ಕಕ್ಕಬ್ಬೆ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಮಾದಕವಸ್ತು ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಯಿತು.
ನಾಪೋಕ್ಲು ಠಾಣಾಧಿಕಾರಿ ರಾಘವೇಂದ್ರ ಅವರು ಮಾದಕವಸ್ತು ಸೇವನೆ ಮತ್ತು ಮಾರಾಟ ಬಗ್ಗೆ ಕಾನೂನಿನ ಅರಿವು ಮೂಡಿಸಿ, ಇದರ ಸಂಪೂರ್ಣ ನಿರ್ಮೂಲನೆಗೆ ಎಲ್ಲರ ಸಹಕಾರ ಅವಶ್ಯ ಎಂದು ಮಾಹಿತಿ ನೀಡಿದರು. ಪಂಚಾಯಿತಿ ಸದಸ್ಯರು ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷೆ ಶಿಲ್ಪಾ ಲೋಕೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್ ಕುಮಾರ್, ಆಡಳಿತ ಮಂಡಳಿಯ ಸದಸ್ಯರುಗಳಾದ ಚೋಯಮಾಡಂಡ ಹರೀಶ್ ಮೊಣ್ಣಪ್ಪ, ಮಹಮ್ಮದ್ ಬಶೀರ್, ಭರತ್ ಚಂದ್ರ, ದೇವಯ್ಯ, ಕುಂಡAಡ ರಜಾಕ್, ಕೆಡಿಪಿ ಸದಸ್ಯರಾದ ರೈನಾ ಕಾರ್ಯಪ್ಪ ಮತ್ತು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಕರ್ತಂಡ ಶೈಲಾ ಕುಟ್ಟಪ್ಪ ಹಾಗೂ ಶಿಕ್ಷಕರು, ಸಂಜೀವಿನಿ ಒಕ್ಕೂಟದ ಸದಸ್ಯರುಗಳು, ಶಾಲಾ ವಿದ್ಯಾರ್ಥಿಗಳು, ಆಟೋ ಚಾಲಕರು ಮತ್ತಿತರರು ಭಾಗವಹಿಸಿದ್ದರು.