ಸಿದ್ದಾಪುರ, ಸೆ. ೧೬: ಸಿದ್ದಾಪುರದ ಗುಹ್ಯ ಅಗಸ್ತೆö್ಯÃಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ೨೦೨೪-೨೦೨೫ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಎಂ.ಎಸ್. ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ತಾ.೧೭ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಸಿದ್ದಾಪುರದ ಎಂ.ಜಿ. ರಸ್ತೆಯಲ್ಲಿರುವ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಸಂಘದ ವತಿಯಿಂದ ನಡೆಯುತ್ತಿರುವ ಬ್ಯಾಂಕ್ ಹಾಗೂ ಪೆಟ್ರೋಲ್ ಬಂಕ್‌ನಲ್ಲಿ ಉತ್ತಮ ವ್ಯವಹಾರ ನಡೆಯುತ್ತಿದ್ದು ಸಂಘದ ಸದಸ್ಯರಿಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಎಂ.ಎಸ್. ವೆಂಕಟೇಶ್ ಮಾಹಿತಿ ನೀಡಿದರು. ಸಂಘದ ಸದಸ್ಯರಿಗೆ ಹಾಗೂ ರೈತರಿಗೆ ವಿವಿಧ ಯೋಜನೆಗಳ ಅಡಿಯಲ್ಲಿ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದ್ದು ಉತ್ತಮ ವ್ಯವಹಾರ ನೀಡುತ್ತಿರುವ ಹಿನ್ನೆಲೆಯಲ್ಲಿ ಸಂಘಕ್ಕೆ ಹಲವಾರು ಪ್ರಶಸ್ತಿ ಲಭಿಸಿದೆ. ಸಂಘದ ವತಿಯಿಂದ ಸಂಘದ ಸದಸ್ಯರುಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯಧನ ನೀಡಲಾಗುತ್ತಿದೆ. ಸಂಘÀವು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ಅಲ್ಲದೆ ಸಹಕಾರ ಸಂಘದಲ್ಲಿ ಉತ್ತಮ ವ್ಯವಹಾರ ಮಾಡಿದ ಮತ್ತು ಉತ್ತಮ ಕೃಷಿ ಉತ್ತಮ ಸಾಧನೆ ಮಾಡಿದ ವ್ಯಕ್ತಿಗಳನ್ನು ಸಂಘದ ಮಹಾಸಭೆ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ವೆಂಕಟೇಶ್ ವಿವರಿಸಿದರು.