ಗೋಣಿಕೊಪ್ಪಲು. ಸೆ.೧೬: ಗೊಟ್ಟಡ ಕಳತ್ಮಾಡುವಿನ ಶ್ರೀ ಅಯ್ಯಪ್ಪ ಕ್ರೀಡಾ ಮತ್ತು ಸಾಂಸ್ಕೃತಿಕ ಸೇವಾ ಸಂಘ ಗೌರಿ ಗಣೇಶ ಉತ್ಸವ ಸಮಿತಿಯಿಂದ ೨೭ನೇ ವರ್ಷದ ಗೌರಿ ಗಣೇಶ ವಿಸರ್ಜನೆಯು ಯಶಸ್ವಿಯಾಗಿ ಜರುಗಿತು. ಮುಂಜಾನೆಯಿAದ ಸಂಜೆಯವರೆಗೂ ವಿವಿಧ ವಿಭಾಗಗಳಲ್ಲಿ ಕ್ರೀಡೋತ್ಸವ ಕಾರ್ಯಕ್ರಮವು ಸ್ಥಳೀಯ ಮೈದಾನದಲ್ಲಿ ಜರುಗಿತು.
ಓಟದ ಸ್ಪರ್ಧೆ, ಹಗ್ಗಜಗ್ಗಾಟ, ಶಾಟ್ಪುಟ್ ಸೇರಿದಂತೆ ಇನ್ನಿತರ ಕ್ರೀಡೆಗಳು ನಡೆದವು. ಗ್ರಾಮಸ್ಥರೆಲ್ಲರೂ ಒಟ್ಟಾಗಿ ಸೇರಿ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದರು. ವಿಜೇತರಿಗೆ ಆಕರ್ಷಕ ಬಹುಮಾನದೊಂದಿಗೆ ಪಾರಿತೋಷಕವನ್ನು ನೀಡಲಾಯಿತು. ೧೦ನೇ ತರಗತಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದು ಗ್ರಾಮಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವ ಮೂಲಕ ಗೌರವಿಸಲಾಯಿತು.
ಸಂಜೆಯ ವೇಳೆ ನಡೆದ ಸಭಾ ಕಾರ್ಯಕ್ರಮವನ್ನು ಗೌರಿ ಗಣೇಶ ಉತ್ಸವ ಸಮಿತಿಯ ಅಧ್ಯಕ್ಷರಾದ ಬಿ.ಎಸ್ ಸತೀಶ್ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೊಲ್ಲಿರ ಗೋಪಿ ಚಿಣ್ಣಪ್ಪ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೊಲ್ಲಿರ ಧರ್ಮಜ, ಗ್ರಾಮ ಪಂಚಾಯಿತಿ ಸದಸ್ಯರಾದ ಕೊಲ್ಲಿರ ಧನು ಪೂಣಚ್ಚ, ಸುಶೀಲ, ವಿ.ವಿ.ಪ್ರಕಾಶ್ ಸೇರಿದಂತೆ ಊರಿನ ಗಣ್ಯರಾದ ಬಲ್ಯಮಂಡ ವೇಣು ಮಂದಣ್ಣ, ಕೊಕ್ಕಲೆರ ಸೋಮಣ್ಣ, ವಿ.ಎಂ ಗಿರಿಯಪ್ಪ, ಹೊಳೆಕೆರೆ ಪ್ರಭು ಉತ್ತಪ್ಪ, ಕೊಲ್ಲಿರ ಗಯಾ ಕಾವೇರಪ್ಪ, ನಿವೃತ್ತ ಶಿಕ್ಷಕರಾದ ಪೂದ್ರಿಮಾಡ ತಾರ, ಕೃಷಿಕರಾದ ಸಾಬು ಮುತ್ತಣ್ಣ, ಕತ್ರಿಕೊಲ್ಲಿ ನಂಜುAಡ ಕುಮಾರ್, ಕಾಯೇರ ಪೂಣಚ್ಚ, ವಿ.ಎಂ ಗಿರಿಯಪ್ಪ, ಬಲ್ಯಮಂಡ ವೇಣು ಮಂದಣ್ಣ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೊಲ್ಲಿರ ಗೋಪಿ ಚಿಣ್ಣಪ್ಪ, ಗ್ರಾಮದಲ್ಲಿ ಎಲ್ಲರೂ ಒಟ್ಟಾಗಿ ಸೇರಿ ವಾರ್ಷಿಕವಾಗಿ ಗೌರಿ ಗಣೇಶ ಉತ್ಸವವನ್ನು ಅತ್ಯಂತ ಯಶಸ್ವಿಯಾಗಿ ಮಾಡುವುದಲ್ಲದೆ ಗ್ರಾಮೀಣ ಮಕ್ಕಳಿಗೆ ಕ್ರೀಡೆಯನ್ನು ಆಯೋಜಿಸುವ ಮೂಲಕ ಪ್ರತಿಭೆಗಳಿಗೆ ಅವಕಾಶಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದರು. ಕಾರ್ಯಕ್ರಮದ ಅಂಗವಾಗಿ ನಿವೃತ್ತ ಶಿಕ್ಷಕರಾದ ಪೂದ್ರಿಮಾಡ ತಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಂಜೆಯ ವೇಳೆ ಅಲಂಕೃತ ವಿದ್ಯುತ್ ಮಂಟಪದಲ್ಲಿ ಗೌರಿಗಣೇಶವನ್ನು ಕುಳ್ಳಿರಿಸಿ ವಾದ್ಯ ಗೋಷ್ಠಿಯೊಂದಿಗೆ ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ಸಾಗಿ ಸ್ಥಳೀಯ ಚಾಮುಂಡೇಶ್ವರಿ ಕೆರೆಯಲ್ಲಿ ಶಾಸ್ತೊçÃಕ್ತವಾಗಿ ಮೂರ್ತಿಯನ್ನು ವಿಸರ್ಜನೆ ಮಾಡಲಾಯಿತು.
ಶ್ರೀ ಅಯ್ಯಪ್ಪ ಕ್ರೀಡಾ ಮತ್ತು ಸಾಂಸ್ಕೃತಿಕ ಸೇವಾ ಸಂಘ ಗೌರಿ ಗಣೇಶ ಉತ್ಸವ ಸಮಿತಿಯ ಉಪಾಧ್ಯಕ್ಷರು, ಕಾರ್ಯದರ್ಶಿ, ಖಜಾಂಚಿ, ನಿರ್ದೇಶಕರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಊರಿನ ಗಣ್ಯರು ಹಾಗೂ ನಾಗರಿಕರು ಉತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವಾರ್ಷಿಕವಾಗಿ ಸಂಘವು ನಡೆಸುವ ಕಾರ್ಯಕ್ರಮವನ್ನು ಜನರ ಮುಂದಿಡುವ ಮೂಲಕ ಆಡಳಿತ ಮಂಡಳಿಯ ಪಾರದರ್ಶಕ ಲೆಕ್ಕಚಾರಕ್ಕೆ ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದರು.