ಸೋಮವಾರಪೇಟೆ, ಸೆ. ೧೬: ಪ್ರಸಕ್ತ ಸಾಲಿನ ಅತಿವೃಷ್ಟಿಯಿಂದ ಹಾನಿಗೀಡಾಗಿರುವ ಫಸಲು ನಷ್ಟದ ಬಗ್ಗೆ ತಂಡವಾರು ಜಂಟಿ ಸಮೀಕ್ಷೆ ನಡೆಸಿ ವರದಿ ನೀಡಬೇಕೆಂದು ತಾಲೂಕು ತಹಶೀಲ್ದಾರ್ ಕೆ. ಕೃಷ್ಣಮೂರ್ತಿ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಜಾ ಸೌಧದ ತಹಶೀಲ್ದಾರ್ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಜಂಟಿ ಸಮೀಕ್ಷೆಗೆ ತಕ್ಷಣ ಕಾರ್ಯಪ್ರವೃತ್ತರಾಗಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕೃಷಿ ನಿರ್ದೇಶಕರು, ಸಹಾಯಕ ತೋಟಗಾರಿಕಾ ನಿರ್ದೇಶಕರು, ಕಾಫಿ ಮಂಡಳಿಯ ಸಂಪರ್ಕಾಧಿಕಾರಿಗಳೊAದಿಗೆ ಕಂದಾಯ ಇಲಾಖೆಯ ಎಲ್ಲಾ ಸಿಬ್ಬಂದಿಗಳನ್ನು ಒಳಗೊಂಡAತೆ ಸಭೆ ನಡೆಸಿದ ತಹಶೀಲ್ದಾರರು, ಈ ಸಾಲಿನ ಅತೀವೃಷ್ಟಿಯಿಂದ ಕೃಷಿ ಫಸಲು, ತೋಟಗಾರಿಕಾ ಬೆಳೆ ಹಾಗೂ ಕಾಳುಮೆಣಸು, ಕಾಫಿಕೃಷಿ ನಷ್ಟವಾಗಿರುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಬೇಕು. ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕೆಂದು ಸೂಚಿಸಿದರು.