ಮಡಿಕೇರಿ, ಸೆ. ೧೬ : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ತಾ. ೨೪ ರಂದು ಆಯೋಜಿತ ಎರಡನೇ ವರ್ಷದ ಕಾಫಿ ದಸರಾ ಸಂದರ್ಭ ಕಾಫಿಯಿಂದ ತಯಾರಿಸಲ್ಪಡುವ ವೈವಿಧ್ಯಮಯ ಖಾದ್ಯಗಳ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ಮತ್ತು ಕಾಫಿ ದಸರಾ ಸಮಿತಿ ಸಂಚಾಲಕ ಅನಿಲ್ ಎಚ್.ಟಿ. ತಿಳಿಸಿದ್ದಾರೆ. ಕಾಫಿಯ ಮಹತ್ವ ತಿಳಿಸಲು ಮಾಹಿತಿಯುಕ್ತ ಸ್ಪರ್ಧೆಯನ್ನು ತಾ. ೨೪ ರಂದು ಬೆಳಿಗ್ಗೆ ೧೦ ಗಂಟೆಯಿAದ ೧೨ ಗಂಟೆಯವರೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಕಾಫಿ ಫ್ಲೆವರ್ ಕೇಕ್ ವಿಭಾಗ, ಕಾಫಿ ಫ್ಲೆವರ್ ಕಪ್ ಕೇಕ್ ವಿಭಾಗ, ಕಾಫಿ ಫ್ಲೆವರ್ ಬ್ರೌನಿ ವಿಭಾಗ, ಕಾಫಿ ಫ್ಲೆವರ್ ಬಿಸ್ಕತ್ ವಿಭಾಗ, ಕಾಫಿ ಫ್ಲೆವರ್ ಫುಡ್ಡಿಂಗ್ ವಿಭಾಗ. ವಿಭಿನ್ನ ರುಚಿಯಿರುವ ಕಾಫಿ ಪಾನೀಯ ವಿಭಾಗ ಮತ್ತು ಕಾಫಿ ಫ್ಲೇವರ್ ಚಾಕಲೇಟ್ ವಿಭಾಗ ಒಳಗೊಂಡAತೆ ೭ ವಿಭಾಗಗಳಲ್ಲಿ ಸ್ಪರ್ಧೆಗಳು ಆಯೋಜಿತವಾಗಿದೆ. ತಾ. ೨೨ ರೊಳಗಾಗಿ ಸ್ಪರ್ಧಿಗಳು ತಮ್ಮ ಹೆಸರು ನೋಂದಾಯಿಸಲು ಸಂಪರ್ಕಿಸಬೇಕಾದ ಸಂಖ್ಯೆ ಮೇಪಾಡಂಡ ಸವಿತಾ ಕೀರ್ತನ್ ೯೪೪೮೩೦೯೮೧೪