ಕೊಡ್ಲಿಪೇಟೆ, ಸೆ. ೧೬: ತಾಲೂಕಿನ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಶತಮಾನೋತ್ಸವ ಸಂಭ್ರಮದಲ್ಲಿದ್ದು, ಇದರ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಡಾ. ಮಂತರ್ ಗೌಡ ಅವರು ಜಿ.ಪಂ. ಅಭಿಯಂತರರಿಗೆ ಸೂಚಿಸಿದರು.
ಶತಮಾನೋತ್ಸವ ಸಂಭ್ರಮದಲ್ಲಿರುವ ಬೇಳೂರು ಸರ್ಕಾರಿ ಶಾಲೆಯಲ್ಲಿ ಶತಮಾನೋತ್ಸವ ಸಮಾರಂಭ ಆಯೋಜಿಸಲು ಹಳೆ ವಿದ್ಯಾರ್ಥಿಗಳು, ಸಾರ್ವಜನಿಕರು ತೀರ್ಮಾನಿಸಿದ್ದು, ಅವರ ಆಹ್ವಾನದ ಮೇರೆ ಶಾಲೆಗೆ ಭೇಟಿ ನೀಡಿದ ಶಾಸಕರು, ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಶಾಲೆಯ ಕಟ್ಟಡ, ಮೇಲ್ಛಾವಣಿ ಸೇರಿದಂತೆ ಇನ್ನಿತರ ದುರಸ್ತಿ ಕಾರ್ಯವನ್ನು ತಕ್ಷಣ ಕೈಗೊಳ್ಳಬೇಕು. ಶತಮಾನೋತ್ಸವ ಸಮಾರಂಭ ಅರ್ಥಪೂರ್ಣವಾಗಿ ನಡೆಯಬೇಕು. ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಸಂಬAಧ ಹಳೆ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳು, ಗ್ರಾಮಸ್ಥರು, ಶಾಲಾ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರುಗಳೊಂದಿಗೆ ಶಾಸಕರು ಚರ್ಚಿಸಿದರು. ಈ ಸಂದರ್ಭ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕುಮಾರ್, ಪ್ರಮುಖರಾದ ಕೆ.ಪಿ. ಚಂದ್ರಕಲಾ, ಮುಖ್ಯಶಿಕ್ಷಕ ಯೋಗೇಶ್, ಸ್ಥಳೀಯರಾದ ಬಸವರಾಜು, ಕೆ.ಪಿ. ಸುದರ್ಶನ್, ಆನಂದ್ ಸೇರಿದಂತೆ ಇತರರು ಇದ್ದರು.