ಮಡಿಕೇರಿ, ಸೆ.೧೬: ಪ್ರಜಾಪ್ರಭುತ್ವ ಇತಿಹಾಸವನ್ನು ಹೊಂದಿದAತಹ ಭಾರತದಲ್ಲಿ ಜನಿಸಿರುವ ನಾವೇ ಪುಣ್ಯವಂತರು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಬಣ್ಣಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ದೇಶ ಅಭಿವೃದ್ಧಿಯಾಗಿ ಸುಸ್ಥಿರವಾಗಿದೆ. ಜಾತಿ ಧರ್ಮ ಭೇದಭಾವ ಇಲ್ಲದೆ ಹೀಗೆ ಸಾಗಬೇಕೆಂದರೆ ನಮ್ಮ ಮತ-ನಮ್ಮ ಹಕ್ಕು ಎನ್ನುವ ಘೋಷ ವಾಕ್ಯವನ್ನು ೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಪ್ರಜೆಯೂ ಮತ ಚಲಾಯಿಸುವ ಮುಖಾಂತರ ಪಾಲಿಸಬೇಕು.

ಪ್ರಜಾಪ್ರಭುತ್ವ ಆಡಳಿತದ ಮೇಲೆ ಯುವ ಪೀಳಿಗೆ ಒಲವು ಮೂಡಿಸುವ ಕಾರ್ಯಕ್ರಮ ಹೆಚ್ಚಿಸಬೇಕು. ರಾಜಕೀಯದ ಆಡಳಿತ ಕುರಿತು ಶಿಕ್ಷಣವನ್ನು ನೀಡಬೇಕು. ಯುವ ಪೀಳಿಗೆಯನ್ನು ಸೇರಿಸಿಕೊಂಡು ರಾಜಕೀಯ ಕಾರ್ಯಕ್ರಮಗಳನ್ನು ನಡೆಸುವಂತಾಗಬೇಕು. ಆಗಲೇ ರಾಜ್ಯವು ಸುಸ್ಥಿರವಾಗಿರುವುದು ಎಂದು ನುಡಿದರು.

ಅಕ್ಕ-ಪಕ್ಕದ ರಾಷ್ಟçದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯನ್ನು ಗಮನಿಸಿ, ಅದನ್ನರಿತುಕೊಂಡು ಮುಂದಾಗುವ ಕೆಡುಕನ್ನು ತಪ್ಪಿಸಲು ಪ್ರಜೆಗಳೆಲ್ಲರೂ ಒಟ್ಟುಗೂಡಿ ದೇಶಕ್ಕೆ ಒಳಿತನ್ನು ಮಾಡಬೇಕು. ಸಂವಿಧಾನವನ್ನು ಪ್ರತಿಯೊಬ್ಬರ ಜೀವನದಲ್ಲಿಯೂ ಅನ್ವಯ ಮಾಡಿಕೊಳ್ಳುವಂತಾಗಬೇಕು. ಹಾಗೆಯೇ ಪಾಲಿಸಿ ಗೌರವಿಸಬೇಕು. ಪ್ರತಿಯೊಬ್ಬರೂ ನಾಯಕರೇ, ನಾಯಕನಾಗಿ ನಾಯಕನಂತೆ ಮಾತನಾಡಬೇಕು. ಪ್ರಶ್ನಿಸುವ ಮನೋಭಾವನೆಯನ್ನು ಬೆಳೆಸಿಕೊಂಡು ತಮ್ಮ-ತಮ್ಮ ಹಕ್ಕುಗಳನ್ನು ದೊರಕಿಸಿಕೊಳ್ಳಬೇಕು ಎಂದು ನುಡಿದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಹಲವು ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತ ರಾಷ್ಟçಕ್ಕೆ ಉತ್ತಮ ಸಂವಿಧಾನ ನೀಡಿದ್ದಾರೆ. “ರಾಜಕೀಯ ವ್ಯವಸ್ಥೆಯಲ್ಲಿ ಸಾರ್ವಜನಿಕರೇ ಆಸ್ತಿ” ಎಂದು ನೆಲ್ಸನ್ ಮಂಡೇಲಾ ಅವರು ಹೇಳಿದಂತೆ ನಾವೆಲ್ಲರೂ ನಡೆದುಕೊಳ್ಳಬೇಕು ಎಂದು ತಿಳಿಸಿದರು.

ಪ್ರಜಾಪ್ರಭುತ್ವವನ್ನು ನಾಯಕರುಗಳು ಮಾತ್ರವಲ್ಲ ಸಾರ್ವಜನಿಕರು ಕಾಪಾಡಬೇಕು ಎಂದು ತಿಳಿಸಿದರು. ಜಿಲ್ಲಾಮಟ್ಟದಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಮಾಡುವುದಾಗಿ ಶಾಸಕÀ ಡಾ.ಮಂತರ್ ಗೌಡ ಅವರು ತಿಳಿಸಿದರು. ನಗರದ ಗುಡ್ಡೆಮನೆ ಅಪ್ಪಯ್ಯ ಗೌಡ ಸ್ಮಾರಕ ಬಳಿ ಅಂಬೇಡ್ಕರ್ ಸ್ಮಾರಕ ನಿರ್ಮಿಸಲು ಗಣ್ಯರಿಂದ ಸ್ಥಳ ವೀಕ್ಷಿಸಲಾಯಿತು.

ಮುಖ್ಯ ಭಾಷಣಕಾರರಾಗಿ ಆಗಮಿಸಿದ ಎಫ್‌ಎಂಕೆಎAಸಿ ಕಾಲೇಜಿನ ಪ್ರಾಧ್ಯಾಪಕರಾದ ಶ್ರೀಧರ್ ಮಾತನಾಡಿ, ರಾಷ್ಟçಮಟ್ಟದಿಂದ ಅಂತರರಾಷ್ಟಿçÃಯ ಮಟ್ಟಕ್ಕೆ ನಮ್ಮ ಭಾರತ ಸಂವಿಧಾನ ತಲುಪಿದ್ದು, ಇಂತಹ ಮಹತ್ವಪೂರ್ಣ ಘಟನೆಯು ಭಾರತವನ್ನು ವಿಶ್ವದಾದ್ಯಂತ ಗುರುತಿಸಲು ಸಾಧ್ಯವಾಗಿದ್ದು ಸಂತೋಷಕರ ಸಂಗತಿಯಾಗಿದೆ ಎಂದರು.

ಡಿ.ಎಸ್.ಎಸ್ ಸಂಚಾಲಕ ದಿವಾಕರ್ ಮಾತನಾಡಿ, ಅಂಬೇಡ್ಕರ್ ಭವನ ಸ್ಥಾಪನೆಗೆ ಸ್ಥಳ ಅವಕಾಶವನ್ನು ನೀಡಬೇಕೆಂದು ಮೊದಲು ಗುರುತಿಸಲಾದ ಸ್ಥಳವು ಸಮಿತಿಗೆ ಅಸಮಾಧಾನಕರವಾಗಿದ್ದು ಬೇರೆ ಸ್ಥಳವನ್ನು ನಿಗದಿಪಡಿಸಬೇಕೆಂದು ಗಣ್ಯರಲ್ಲಿ ಮನವಿ ಮಾಡಿದರು.

ಈ. ರಾಜು ಮತ್ತು ತಂಡದವರು ಸಂವಿಧಾನ ಕುರಿತು ಹಾಡು ಹಾಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಂದ್ರಿರ ಮೋಹನ್ ದಾಸ್, ನಗರಸಭೆ ಸದಸ್ಯ ಸತೀಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್‌ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ್, ದಲಿತ ಸಂಘರ್ಷ ಸಮಿತಿ ಪ್ರಮುಖರಾದ ವೀರಭದ್ರಯ್ಯ, ದೀಪಕ್, ರಾಜು, ಜನಾರ್ಧನ, ಜಗದೀಶ್, ಮಡಿಕೇರಿ ತಾಲೂಕು ತಹಶೀಲ್ದಾರ್ ಶ್ರೀಧರ್, ಡಿಎಸ್‌ಎಸ್ ಸಂಚಾಲಕರಾದ ದಿವಾಕರ್, ಮೋಹನ್ ಮೌರ್ಯ, ದೀಪಕ್ ಪೊನ್ನಪ್ಪ, ಗಣೇಶ್, ಗೋಪಾಲ್ ಮತ್ತಿತರರು ಇದ್ದರು.

ಅಂಬೇಡ್ಕರ್ ವಸತಿ ಶಾಲೆಯ ಮಕ್ಕಳು ನಾಡಗೀತೆ ಹಾಡಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶೇಖರ್ ಅವರು ಸ್ವಾಗತಿಸಿ, ವಂದಿಸಿದರು.