ಮಡಿಕೇರಿ, ಸೆ. ೧೬: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಕೊಡಗು ಜಿಲ್ಲೆಯ ಹಿರಿಯ ನಾಗರಿಕರಿಗೆ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಗರದ ಜ. ತಿಮ್ಮಯ್ಯ ಕ್ರೀಡಾಂಗಣದಲ್ಲಿ ತಾ.೧೮ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಡೆಯಲಿದೆ.

ಹಿರಿಯ ನಾಗರಿಕರಿಗೆ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಏಕಪಾತ್ರಾಭಿನಯ, ಗಾಯನ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಹಿರಿಯ ನಾಗರಿಕರು ಸ್ಪರ್ಧೆಯ ದಿನದಂದು ವಯಸ್ಸಿನ ದೃಢೀಕರಣಕ್ಕಾಗಿ ಆಧಾರ್ ಕಾರ್ಡ್/ ಹಿರಿಯ ನಾಗರಿಕರ ಗುರುತಿನ ಚೀಟಿ/ ಓಟರ್ ಐಡಿ ಇವುಗಳಲ್ಲಿ ಯಾವುದಾದರು ಒಂದರ ಪ್ರತಿ ತರುವುದು.

ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ.೦೮೨೭೨-೨೯೫೮೨೯ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.