ಕೂಡಿಗೆ, ಸೆ ೧೭: ಮೈಸೂರು-ಮಡಿಕೇರಿ ರಾಜ್ಯ ಹೆದ್ದಾರಿಯಲ್ಲಿ ಕುಶಾಲನಗರದಿಂದ ಮಡಿಕೇರಿ ಮತ್ತು ವೀರಾಜಪೇಟೆ ಕಡೆಗೆ ಹಾಗೂ ಹಾರಂಗಿ ಕಡೆಗೆ ತೆರಳುವ ಎಲ್ಲಾ ವಾಹನಗಳ ಬಗ್ಗೆ ನಿಗಾವಹಿಸಲು ಹೆದ್ದಾರಿಯ ಗುಡ್ಡೆಹೊಸೂರು ಸರ್ಕಲ್ನಲ್ಲಿ ನೂತನ ತಂತ್ರಜ್ಞಾನದ ಎರಡು ಎ.ಎನ್.ಪಿ.ಆರ್. ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಹೆಲ್ಮೆಟ್, ಸೀಟ್ ಬೆಲ್ಟ್ ಧರಿಸದೇ ವಾಹನ ಚಾಲನೆ ಮಾಡುವುದು, ಅಪ್ರಾಪ್ತ ವಯಸ್ಸಿನವರು ವಾಹನ ಚಲಾಯಿಸುವುದು, ಓವರ್ ಸ್ಪೀಡ್, ತ್ರಿಬಲ್ ರೈಡಿಂಗ್, ಅತಿ ವೇಗವಾಗಿ ವಾಹನ ೭ನೇ ಪುಟಕ್ಕೆ
(ಮೊದಲ ಪುಟದಿಂದ) ಚಾಲನೆ ಮಾಡುವುದು, ಅಸಮರ್ಪಕ ಪಾರ್ಕಿಂಗ್ ಸೇರಿದಂತೆ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಕಡಿವಾಣ ಹಾಕಲು ಈ ಕ್ಯಾಮರಾವನ್ನು ಅಳವಡಿಸಲಾಗಿದೆ.
ಸಂಚಾರಿ ನಿಯಮ ಉಲ್ಲಂಘನೆ ಮಾಡುವುದು ಕ್ಯಾಮರಾದಲ್ಲಿ ಸೆರೆಯಾದರೆ ಸಂಬAಧಿಸಿದ ವಾಹನ ಮಾಲೀಕರಿಗೆ ದಂಡ ರಶೀತಿ ರವಾನೆ ಆಗಲಿದೆ. ಆದ್ದರಿಂದ ಕಡ್ಡಾಯವಾಗಿ ವಾಹನ ಸವಾರರು ಸಂಚಾರಿ ನಿಯಮವನ್ನು ಪಾಲಿಸುವಂತೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ. ನೂತನ ತಂತ್ರಜ್ಞಾನದ ಕ್ಯಾಮರಾ ಅಳವಡಿಸುವ ಸಂದರ್ಭ ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ರಾಮಚಂದ್ರ ಸಂಚಾರಿ ನಿಯಮಗಳನ್ನು ಪ್ರತಿಯೊಬ್ಬರು ಪಾಲನೆ ಮಾಡುವ ಮೂಲಕ ಸಹಕಾರ ನೀಡಬೇಕು ಎಂದು ಹೇಳಿದರು.
-ಕೆ. ಕೆ. ನಾಗರಾಜಶೆಟ್ಟಿ