ಮಡಿಕೇರಿ, ಸೆ. ೧೭: ಕೊಡಗು ಪತ್ರಕರ್ತರ ಸಂಘ(ರಿ.) ಪತ್ರಕರ್ತರ ಕ್ಷೇಮಾಭಿವೃದ್ಧಿ ಸಮಿತಿಯಿಂದ ತಾ.೧೯ರಂದು ಮಡಿಕೇರಿಯ ಕಾವೇರಿ ಹಾಲ್‌ನಲ್ಲಿ ಸಾರ್ವಜನಿಕರು, ಪತ್ರಕರ್ತರು, ಪತ್ರಕರ್ತರ ಕುಟುಂಬ ವರ್ಗದವರು, ಪತ್ರಿಕಾ ಕ್ಷೇತ್ರದ ಸಿಬ್ಬಂದಿಗಳು, ಪತ್ರಿಕಾ ವಿತರಕರು ಹಾಗೂ ಕುಟುಂಬದವರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ.

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆಯ ೧೫ ವಿಭಾಗಗಳ ನುರಿತ ತಜ್ಞರುಗಳು ಹಾಗೂ ವೈದ್ಯರುಗಳು ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಲಿದ್ದಾರೆ.

ನೇತ್ರ ತಜ್ಞರು, ಜನರಲ್ ಮೆಡಿಸಿನ್, ಮೂಳೆ ತಜ್ಞರು, ಇ.ಎನ್.ಟಿ. ತಜ್ಞರು, ಶ್ವಾಸಕೋಶ ತಜ್ಞರು, ದಂತ ವೈದ್ಯಕೀಯ, ಶಸ್ತç ಚಿಕಿತ್ಸಕರು, ಮಕ್ಕಳ ತಜ್ಞರು, ಸ್ತ್ರೀರೋಗ ತಜ್ಞರು, ಶ್ರವಣ ಆರೋಗ್ಯ ತಜ್ಞರು, ಮಾನಸಿಕ ಆರೋಗ್ಯ ತಜ್ಞರು ಸೇರಿದಂತೆ ೧೫ ವಿಭಾಗಗಳ ನುರಿತ ತಜ್ಞರು ಈ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಆರೋಗ್ಯಕ್ಕೆ ಸಂಬAಧಿಸಿದ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ಆಯುಷ್ಮಾನ್ ಭಾರತ್ ಯೋಜನಾಧಿಕಾರಿ ಕೂಡ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೨ ಗಂಟೆಯವರಗೆ ಈ ಶಿಬಿರ ನಡೆಯಲಿದ್ದು, ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಲಿದ್ದಾರೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆಯ ಡೀನ್ ನಿರ್ದೇಶಕ ಡಾ. ಲೋಕೇಶ್ ಎ.ಜೆ, ವೈದ್ಯಕೀಯ ಅಧೀಕ್ಷಕ ಡಾ. ಹೆಚ್.ಕೆ. ಸೋಮಶೇಖರ್, ಜಿಲ್ಲಾ ಸರ್ಜನ್ ಡಾ. ನಂಜುAಡಯ್ಯ ಹಾಗೂ ತುರ್ತು ಚಿಕಿತ್ಸಾ ಘಟಕದ ಮುಖ್ಯಸ್ಥ ಡಾ. ಮೋಹನ್ ಅಪ್ಪಾಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಆರೋಗ್ಯ ವಿಷಯಕ್ಕೆ ಸಂಬAಧಿಸಿದ ಮಾಹಿತಿ ನಿಡಲಿದ್ದಾರೆ.

ಕೊಡಗು ಪತ್ರಕರ್ತರ ಸಂಘ(ರಿ), ಕ್ಷೇಮಾಭಿವೃದ್ಧಿ ಸಮಿತಿ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ಈ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರದ ಪ್ರಯೋಜನವನ್ನು ಸಾರ್ವಜನಿಕರು, ಪತ್ರಕರ್ತರು, ಪತ್ರಕರ್ತರ ಕುಟುಂಬ ವರ್ಗದವರು, ಪತ್ರಿಕಾ ಕ್ಷೇತ್ರದ ಸಿಬ್ಬಂದಿಗಳು, ಪತ್ರಿಕಾ ವಿತರಕರು, ಕುಟುಂಬ ವರ್ಗದವರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿಕುಮಾರ್ ಜಿ.ವಿ. ಹಾಗೂ ಪ್ರಧಾನ ಕಾರ್ಯದರ್ಶಿ ಅರುಣ್ ಕೂರ್ಗ್ ಕೋರಿದ್ದಾರೆ.