ಸೋಮವಾರಪೇಟೆ, ಸೆ. ೧೭: ಪಟ್ಟಣ ಪಂಚಾಯಿತಿ ವತಿಯಿಂದ ಎರಡನೇ ವಾರ್ಡ್ನ ಬಾಣಾವರ ರಸ್ತೆಯ ಅಂಬೇಡ್ಕರ್ ಪ್ರತಿಮೆ ಸಮೀಪ ರೂ. ೫ಲಕ್ಷ ವೆಚ್ಚದಲ್ಲಿ ನೂತನ ಬಸ್ ತಂಗುದಾಣ ನಿರ್ಮಾಣಕ್ಕೆ ಶಾಸಕ ಡಾ. ಮಂತರ್ ಗೌಡ ಚಾಲನೆ ನೀಡಿದರು.

ಇದರೊಂದಿಗೆ ೬ನೇ ವಾರ್ಡ್ನಲ್ಲಿ ರೂ. ೭ ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸಲಾಯಿತು. ಈ ಸಂದರ್ಭ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಉಪಾಧ್ಯಕ್ಷೆ ಮೋಹಿನಿ, ಸದಸ್ಯರಾದ ಪಿ.ಕೆ. ಚಂದ್ರು, ಶೀಲಾ ಡಿಸೋಜ, ವೆಂಕಟೇಶ್, ಕಿರಣ್ ಉದಯಶಂಕರ್, ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಇದ್ದರು.