ಮಡಿಕೇರಿ, ಸೆ. ೧೭ : ಕಾರ್ಮಿಕ ಸಚಿವ ಸಂತೋಷ್ ಲಾಡ್ ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಅವರೊಂದಿಗೆ ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಯಂ.ಸಿ ನಾಣಯ್ಯ ಅವರ ಮನೆಗೆ ಭೇಟಿ ನೀಡಿದರು. ಯಂ.ಸಿ. ನಾಣಯ್ಯ ಅವರ ಹುಟ್ಟು ಹಬ್ಬಕ್ಕೆ ಶುಭ ಕೋರಿ ಯೋಗಕ್ಷೇಮ ವಿಚಾರಿಸಿದರು. ಈ ಸಂದರ್ಭ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಎಸ್. ಆರ್. ಮೆಹರೋಜ್ ಖಾನ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.