ಸೋಮವಾರಪೇಟೆ, ಸೆ. ೧೭: ಕರ್ನಾಟಕ ಪ್ರೆಸ್ಕ್ಲಬ್ ವತಿಯಿಂದ ಪ್ರತಿ ವರ್ಷ ಆಯೋಜಿಸುವ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ವೈದ್ಯ ಸೇವಾ ರತ್ನ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಬಾರಿ ಮೂಲತಃ ಹಾನಗಲ್ಲು ಗ್ರಾಮದ ಡಾ. ಮಧುಸೂದನ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರಿನ ಜ್ಞಾನ ಭಾರತಿ ಕಲಾಗ್ರಾಮದಲ್ಲಿ ನಡೆದ ಸಮಾರಂಭದಲ್ಲಿ ಮಾಗಡಿ ಕಂಚುಗಲ್ ಬಂಡೇಮಠದ ಮಠಾಧೀಶರಾದ ಶ್ರೀ ಮಹಾಲಿಂಗ ಮಹಾಸ್ವಾಮೀಜಿ, ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವಥ್ನಾರಾಯಣ, ಒಕ್ಕಲಿಗರ ಸಂಘದ ನಿರ್ದೇಶಕ ಡಾ. ಅಂಜನಪ್ಪ, ಮನೋವೈದ್ಯ ಡಾ. ಸಿ.ಆರ್. ಚಂದ್ರಶೇಖರ್, ಕರ್ನಾಟಕ ಪ್ರೆಸ್ ಕ್ಲಬ್ ಅಧ್ಯಕ್ಷ ಎಂ. ದಯಾನಂದ್, ಗೌರವಾಧ್ಯಕ್ಷ ಎಸ್. ರಾಮಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಸ್ .ಜಿ. ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದು, ಪ್ರಶಸ್ತಿ ಪ್ರದಾನ ಮಾಡಿದರು.
ಡಾ. ಮಧುಸೂದನ್ ಅವರು ಹಾನಗಲ್ಲು ನಿವಾಸಿ, ಜಿಲ್ಲೆಯ ವಿವಿಧೆಡೆ ಪೋಸ್ಟ್ ಮಾಸ್ಟರ್ ಆಗಿದ್ದ ಎನ್.ಸಿ. ಚಂದ್ರ ಅವರ ಪುತ್ರರಾಗಿದ್ದು, ಸೋಮವಾರಪೇಟೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣದ ನಂತರ ಬೆಂಗಳೂರಿನಲ್ಲಿ ಉನ್ನತ ವಿದ್ಯಾಭ್ಯಾಸ ಪೂರೈಸಿ, ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.